ಬೆಂಗಳೂರು:ಜಾಗತಿಕವಾಗಿ ಭೀಕರತೆ ಸೃಷ್ಟಿಸಿರುವ ಮಹಾಮಾರಿ ಕರೊನಾ ವೈರಸ್​ ಸೋಂಕು ರಾಜ್ಯಕ್ಕೂ ಕಾಲಿಟ್ಟು ಈಗಾಗಲೇ ಒಬ್ಬರನ್ನು ಬಲಿಪಡೆದುಕೊಂಡಿದೆ. ದಿನೇ ದಿನೇ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿದ್ದು, ಇಂದು ಮತ್ತೊಂದು ಪ್ರಕರಣ ವರದಿಯಾಗಿದೆ.
ಈ ಬಗ್ಗೆ ಟ್ವೀಟ್​ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಮಾಹಿತಿ ಖಚಿತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ ಕರೊನಾ ವೈರಸ್​ ಸೋಂಕು ಧೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಶ್ರೀರಾಮುಲು ಟ್ವೀಟ್​ ಮಾಡಿದ್ದಾರೆ.
ಈ ಪ್ರಕರಣದಿಂದ ರಾಜ್ಯದಲ್ಲಿ ಕರೊನಾ ವೈರಸ್​ ಸೋಂಕಿತರ ಸಂಖ್ಯೆ 16ಕ್ಕೇರಿದ್ದು, ಜನರಲ್ಲಿ ಮತ್ತಷ್ಟು ಭೀತಿಯುಂಟುಮಾಡಿದೆ. ಇನ್ನು ದೇಶಾದ್ಯಂತ ಸೋಂಕಿತರ ಸಂಖ್ಯೆ 275ಕ್ಕೇರಿದ್ದು, ಓರ್ವ ಇಟಲಿ ಪ್ರಜೆ ಸೇರಿದಂತೆ 5 ಮಂದಿ ಬಲಿಯಾಗಿದ್ದಾರೆ.
ಕರೊನಾ​ಗೆ ಬಲಿಯಾದ ಚೀನಾ ವೈದ್ಯನ ಸಾವಿಗೆ ಕ್ಷಮೆಯಾಚಿಸಿದ ಸರ್ಕಾರ: ತನಿಖಾ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ#Covid19ಸೋಂಕು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ.
— B Sriramulu (@sriramulubjp)March 21, 2020

ಇಟಲಿಯಲ್ಲಿ 4 ಸಾವಿರ ಗಡಿ ಮೀರಿದ ಕರೊನಾ ಮೃತರ ಸಂಖ್ಯೆ: ಸ್ಪೇನ್​ನಲ್ಲಿ ಕರಾಳತೆ ಸೃಷ್ಟಿಸಿದ ಕೋವಿಡ್​-19​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 14 =
Remember me
