ಬೆಂಗಳೂರು:ಮಾರಕ ಕರೊನಾ ವೈರಸ್ ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ 6 ಜಿಲ್ಲೆಗಳನ್ನು ಮಾರ್ಚ್​ 31ರವರೆಗೆ ಲಾಕ್​ಡೌನ್​ ಮಾಡಲು ಸರ್ಕಾರ ನಿರ್ಧರಿಸಿದೆ.
ಬೆಂಗಳೂರು, ಕಲಬುರಗಿ, ಕೊಡಗು, ಚಿಕ್ಕಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳು ಮಾರ್ಚ್​ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ. ಇದರ ಅನ್ವಯ ಮಾರ್ಚ್​ 31ರವರೆಗೆ ಆರು ಜಿಲ್ಲೆಗಳಲ್ಲಿ ಅಗತ್ಯ ಸೇವೆಗಳು ಬಿಟ್ಟು ಉಳಿದೆಲ್ಲವು ಸ್ತಬ್ಧವಾಗಲಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿದೆ.
ಮಾ. 31ರ ವರೆಗೆ 6 ಜಿಲ್ಲೆಗಳಲ್ಲಿ ಬಾರ್ ಅ್ಯಂಡ್ ರೆಸ್ಟೋರೆಂಟ್, ಸಾರಿಗೆ, ಮೆಟ್ರೋ ಸಂಚಾರ ಸಂಪೂರ್ಣ ಬಂದ್ ಆಗಲಿದೆ. ಆಸ್ಪತ್ರೆ, ಔಷಧಾಲಯ, ಹಾಲ, ಹೂ, ಹಣ್ಣು, ಪೇಪರ್, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳು ಎಂದಿನಂತೆ ಲಭ್ಯವಾಗಲಿದೆ.
ಧವಳಗಿರಿ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಜತೆ ಮುಖ್ಯಮಂತ್ರಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಈ ಸಂಬಂಧ ಚರ್ಚೆ ನಡೆಸಿದರು. ಕೇಂದ್ರ ಸರ್ಕಾರ ಸೂಚನೆಯಂತೆ ಲಾಕ್​ಡೌನ್​ ಮಾಡಲಾಗಿದೆ.(ದಿಗ್ವಿಜಯ ನ್ಯೂಸ್​)
PHOTOS| ಕರೊನಾ ಸೋಂಕು ತಗುಲದಂತೆ ಏನು ಮಾಡಬೇಕು? ಮಾಡಬಾರದು?: ಉಪಯುಕ್ತ ಮಾಹಿತಿ ಫೋಟೋಗಳಲ್ಲಿ…

ಮಾರಕ ಕರೊನಾ ವೈರಸ್​ನಿಂದ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್​ ಪಾರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
