ಬೆಂಗಳೂರು:ಕರೊನಾ ಕೆಲಸಕ್ಕೆ ನಿಯೋಜಿಸಲಾಗಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಶಿಕ್ಷಣ ಇಲಾಖೆ ಆಯುಕ್ತರು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದು ಕೋರಿದ್ದಾರೆ.
ಜೂ.15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ಶಾಲೆಗಳಿಗೆ ಶಿಕ್ಷಕರು ತೆರಳಬೇಕಿದೆ. ಆದರೆ, ಬಹುತೇಕ ಶಿಕ್ಷಕರು ಕರೊನಾ ಕೆಲಸದಲ್ಲಿ ನಿರತರಾಗಿರುವುದರಿಂದ ಶಾಲೆಗೆ ಹೋಗುವುದು ಕಷ್ಟವಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಭೌತಿಕ ತರಗತಿಗಳು ಪ್ರಾರಂಭವಾಗದೇ ಇದ್ದರೂ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಆನ್​ಲೈನ್​, ಆಫ್​ಲೈನ್​, ದೂರದರ್ಶನ, ಬಾನುಲಿ, ಸ್ಮಾರ್ಟ್​ ಫೋನ್​, ಲ್ಯಾಪ್​ಟಾಪ್​ ನಂತಹ ಪರ್ಯಾಯ ಮಾರ್ಗಗಳ ಮೂಲಕ ಮಕ್ಕಳ ಕಲಿಕೆಯಲ್ಲಿ ನಿರಂತರತೆಯನ್ನು ಕಾಯ್ದುಕೊಳ್ಳಲು ಶಿಕ್ಷಕರು ಕಾರ್ಯನಿರ್ವಹಿಸುವುದು ಅನಿವಾರ್ಯವಾಗಿದೆ.
ಅಲ್ಲದೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯು ಜುಲೈ ಮೂರನೇ ವಾರದಲ್ಲಿ ನಡೆಯಬೇಕಾಗಿರುವುದರಿಂದ ಕರೊನಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಸಿಬ್ಬಂದಿಯನ್ನು ತಕ್ಷಣ ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್​ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದು ಕೋರಿದ್ದಾರೆ.
ವರ್ಗಾವಣೆ ಆರಂಭಿಸಿಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸುವಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಸಂಘಧ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಶಿಕ್ಷಕರ ವರ್ಗಾವಣಾ ನಿಯಂತ್ರಾಣಾಧಿಕಾರಿ ಗೀತಾ ಅವರನ್ನು ಭೇಟಿ ಮಾಡಿ ವರ್ಗಾವಣೆ ಪ್ರಕ್ರಿಯೆ ಕುರಿತು ಚರ್ಚೆ ನಡೆಸಿದ್ದಾರೆ. ಸರ್ಕಾರ ಸೂಚಿಸಿದ ತಕ್ಷಣವೇ ಪ್ರಕ್ರಿಯೆ ಆರಂಭಿಸುವುದಾಗಿ ಅಧಿಕಾರಿ ತಿಳಿಸಿದ್ದಾರೆ.
ಅಕ್ರಮವಾಗಿ ಗಡಿ ದಾಟುತ್ತಿದ್ದ ಐವರು ಬಾಂಗ್ಲಾದೇಶೀಯರ ಬಂಧನ

ರಾತ್ರಿ ಫಾರ್ಮ್​ ಹೌಸ್​ಗೆ ತೆರಳಿದ ಪೊಲೀಸರಿಗೆ ಶಾಕ್​! 15 ಯುವತಿಯರು ಸೇರಿದಂತೆ 61 ಮಂದಿ ಬಂಧನ

ಅಮ್ಮನನ್ನು ಕೊಂದು ಸಾವಿರ ಪೀಸ್​ ಮಾಡಿದ ಮಗ! ಹೆತ್ತವಳ ಮಾಂಸವನ್ನೇ ಫ್ರಿಡ್ಜ್​ನಲ್ಲಿಟ್ಟು ತಿನ್ನುತ್ತಿದ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
