ಬೆಂಗಳೂರು:ದುಬೈನಲ್ಲಿದ್ದ 195 ಕನ್ನಡಿಗರಲ್ಲಿ 6 ಮಂದಿಗೆ ಕರೊನಾ ವೈರಸ್​ ಲಕ್ಷಣಗಳು ಕಂಡುಬಂದಿರುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಭಾನುವಾರ ಟ್ವೀಟ್​ ಮೂಲಕ ತಿಳಿಸಿದ್ದಾರೆ.
ಇಂದು ದುಬೈನಲ್ಲಿದ್ದ 195 ಕನ್ನಡಿಗರನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇವರಲ್ಲಿ 6 ಜನರಿಗೆ ಕೋವಿಡ್​-19 ಲಕ್ಷಣಗಳಿದ್ದರಿಂದ, ಅವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮತ್ತೊಂದು ಟ್ವೀಟ್​ನಲ್ಲಿ ಉಳಿದ ಪ್ರಯಾಣಿಕರನ್ನು ಬೆಂಗಳೂರಿನ ಆಕಾಶ್ ವೈದ್ಯಕೀಯ ಸಂಸ್ಥೆಯ ಪ್ರತ್ಯೇಕಿಸಲ್ಪಟ್ಟ ವಾರ್ಡಿನಲ್ಲಿ ಸೇರಿಸಿ ನಿಗಾವಹಿಸಲಾಗಿದೆ ಎಂದು ಶ್ರೀರಾಮುಲು ಅವರು ಮಾಹಿತಿ ನೀಡಿದ್ದಾರೆ.
ದೇಶದಲ್ಲಿ ಈವರೆಗೆ 300ಕ್ಕೂ ಅಧಿಕ ಮಂದಿಗೆ ಕರೊನಾ ಸೋಂಕು ತಗುಲಿದ್ದು, ಓರ್ವ ಇಟಲಿ ಪ್ರಜೆ ಸೇರಿ ಒಟ್ಟು 7 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.
PHOTOS| ಕರೊನಾ ಸೋಂಕು ತಗುಲದಂತೆ ಏನು ಮಾಡಬೇಕು? ಮಾಡಬಾರದು?: ಉಪಯುಕ್ತ ಮಾಹಿತಿ ಫೋಟೋಗಳಲ್ಲಿ…

ಇಂದು ದುಬೈನಲ್ಲಿದ್ದ 195 ಕನ್ನಡಿಗರನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇವರಲ್ಲಿ 6 ಜನರಿಗೆ#Covid19ಲಕ್ಷಣಗಳಿದ್ದರಿಂದ, ಇವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
— B Sriramulu (@sriramulubjp)March 22, 2020

ಕರೊನಾ ವೈರಸ್ ಲಕ್ಷಣಗಳು 14 ದಿನಗಳಲ್ಲೇ ಕಾಣಿಸಿಕೊಳ್ಳಬೇಕೆಂದೇನೂ ಇಲ್ಲ..17 ದಿನಗಳ ಬಳಿಕವೂ ಪತ್ತೆಯಾಗಬಹುದು..ಎಚ್ಚರ ಇರಲಿ…!

ಉಳಿದ ಪ್ರಯಾಣಿಕರನ್ನು, ಬೆಂಗಳೂರಿನ ಆಕಾಶ್ ವೈದ್ಯಕೀಯ ಸಂಸ್ಥೆಯ ಪ್ರತ್ಯೇಕಿಸಲ್ಪಟ್ಟ ವಾರ್ಡಿನಲ್ಲಿ ಸೇರಿಸಿ ನಿಗಾವಹಿಸಲಾಗಿದೆ.
— B Sriramulu (@sriramulubjp)March 22, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
