ಬೆಂಗಳೂರು:ಕರೊನಾ ಸೋಂಕು ಹೊಂದಿದ್ದ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗು ಗುಣಮುಖವಾಗಿ ಶನಿವಾರ ಆಸ್ಪತ್ರೆಯಿಂದ ಮನೆಗೆ ತೆರಳಿದೆ.
ಮಗುವಿನ ತಾಯಿ ಹಾಗೂ ಅಜ್ಜಿಯನ್ನು ಪರೀಕ್ಷೆಗೆ ಒಳಪಡಿಸಿದ್ದು ಸೋಂಕು ದೃಢಪಟ್ಟಿರಲಿಲ್ಲ. ಹೀಗಾಗಿ ನಿಗಾದಲ್ಲಿದ್ದ ಅವರಿಬ್ಬರೂ ಮಗುವಿನೊಂದಿಗೆ ಬಿಡುಗಡೆಯಾಗಿದ್ದಾರೆ. ದಕ್ಷಿಣಕನ್ನಡದಲ್ಲಿ 12 ಪ್ರಕರಣ ದೃಢಪಟ್ಟಿದ್ದು, 6 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇದರ ಜತೆಗೆ ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ..
10 ತಿಂಗಳ ಹಸುಗೂಸಿಗೆ ಸೋಂಕು ತಗುಲಿದ್ದು, ಚಿಕಿತ್ಸೆ ನೀಡುವುದು ವೈದ್ಯರಿಗೂ ಸವಾಲಾಗಿತ್ತು. ಅದನ್ನು ವೈದ್ಯರು ಸಮರ್ಥವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ವೆನ್‌ಲಾಕ್ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ಒಗ್ಗೂಡಿ ಮಗುವಿಗೆ ಚಿಕಿತ್ಸೆ ನೀಡಿ ಗುಣಮುಖಗೊಳಿಸಿದ್ದಾರೆ.
ಮಗುವಿಗೆ ಸೋಂಕು ದೃಢಪಟ್ಟಾಗ ಗ್ರಾಮದಲ್ಲಿ ಯಾರಿಗೂ ಸೋಂಕು ಕಾಣಿಸಿಕೊಳ್ಳದಿದ್ದರು ಸಜಿಪನಡು ಗ್ರಾಮವನ್ನು ಸಂಪೂರ್ಣ ಸೀಲ್‌ಡೌನ್ ಮಾಡಿ, ಜಿಲ್ಲಾ ಆಡಳಿತವೇ ಗ್ರಾಮಸ್ಥರಿಗೆ ಅಗತ್ಯ ಸಾಮಗ್ರಿ ಹಾಗೂ ಸೌಲಭ್ಯಗಳನ್ನು ಕಲ್ಪಿಸಿದ್ದರು.
ಸೂಕ್ತ ವಾಹನ ವ್ಯವಸ್ಥೆಯಿಲ್ಲದೇ ಮಗು ಸಾವು: ಆಂಬುಲೆನ್ಸ್​ ನೀಡಲು ನಿರಾಕರಣೆ, ಕಣ್ಣೀರಿಡುತ್ತಾ ಮೃತದೇಹ ಹೊತ್ತು ನಡೆದ ತಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 3 =
Remember me
