ಬೆಂಗಳೂರು:ಕರೊನಾ ಭೀತಿಯ ನಡುವೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಸಂಖ್ಯೆಯು ಹೆಚ್ಚಾಗಿದ್ದು, ಕೆಲವರು ವಿಜಯವಾಣಿ.ನೆಟ್ (Vijayavani.net) ಡಿಜಿಟಲ್​ ಮಾಧ್ಯಮ ಹೆಸರು ಮತ್ತು ಲೋಗೋವನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ.
ವಿಜಯವಾಣಿ ವೆಬ್​ಸೈಟ್​ ವಿನ್ಯಾಸದಂತೆ ಫೋಟೋ ಎಡಿಟ್​ ಮಾಡಿ ಅದರ ಮೂಲಕ ಕೆಲ ಕಿಡಿಗೇಡಿಗಳು ಸುಳ್ಳು ಸುದ್ದಿ ಹರಡುವ ಪ್ರಯತ್ನಕ್ಕೆ ಕೈಹಾಕಿದ್ದಾರೆ.
ಬಾಗಲಕೋಟೆಯಲ್ಲಿ ಸೋಂಕಿತರ ಸಂಖ್ಯೆ ತೀವ್ರ ಇಳಿಮುಖವಾಗಿದೆ ಎಂದು ಸುಳ್ಳು ಸುದ್ದಿಯನ್ನು ವಿಜಯವಾಣಿ.ನೆಟ್​ ಹೆಸರಿನಲ್ಲಿ ಹರಿಬಿಟ್ಟಿರುವುದು ಗಮನಕ್ಕೆ ಬಂದಿದೆ. ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಈ ರೀತಿಯ ಕಿಡಿಗೇಡಿತನವನ್ನು ಸಹಿಸಲಾಗದು. ರಾಜ್ಯ ಸರ್ಕಾರ ಬಿಡುಗಡೆ ಮಾಡುವ ಮಾಹಿತಿಯನ್ನಷ್ಟೇ ಪ್ರತಿನಿತ್ಯ ನಮ್ಮ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ.
ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಬಾಗಲಕೋಟೆ ವರದಿಗೆ ಸಂಬಂಧಿಸಿ ವಿಜಯವಾಣಿ.ನೆಟ್​ ಹೆಸರಿನಲ್ಲಿ ಹರಿದಾಡುತ್ತಿರುವ ಸುದ್ದಿ ನಕಲಿಯಾಗಿದೆ. ಇಂತಹ ಸುಳ್ಳು ಸುದ್ದಿಯನ್ನು ಸೃಷ್ಟಿಸುವವರು ಮತ್ತು ಶೇರ್ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು.
ರಾಜ್ಯದಲ್ಲಿ ಒಂದೇ ದಿನ 19 ವೈರಸ್‌ ಪೀಡಿತರು- ಇಬ್ಬರ ಸಾವು: 279ಕ್ಕೇರಿದ ಸೋಂಕಿತರ ಸಂಖ್ಯೆ 80 ಮಂದಿ ಬಿಡುಗಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + twelve =
Remember me
