ಬೆಂಗಳೂರು:ಮಹಾಮಾರಿ ಕರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅತಿ ಹೆಚ್ಚು ಕರೊನಾ ಬಾಧಿತವಾಗಿರುವ ರಾಷ್ಟ್ರದ 170 ಜಿಲ್ಲೆಗಳ ಪೈಕಿ ಕರ್ನಾಟಕದ 8 ಜಿಲ್ಲೆಗಳು ಕೂಡ ಸೇರಿವೆ.
ರಾಜ್ಯದ ಬೆಂಗಳೂರು ನಗರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್​, ಕಲಬುರಗಿ, ಬಾಗಲಕೋಟೆ ಮತ್ತು ಧಾರವಾಡ ಕರೊನಾ ಹಾಟ್​ಸ್ಟಾಟ್​ ಎಂದು ಕೇಂದ್ರ ಸರ್ಕಾರ ಗುರುತಿಸಿದ್ದು, ಈ ಜಿಲ್ಲೆಗಳಲ್ಲಿ 2ನೇ ಹಂತದ ಲಾಕ್​ಡೌನ್​ ಹೆಚ್ಚು ಪರಿಣಾಮಕಾರಿಯಾಗಿರಲಿದೆ.
ಏಪ್ರಿಲ್​ 14ರಂದು ಮೊದಲನೇ ಹಂತದ ಲಾಕ್​ಡೌನ್​ ಮುಗಿದಿದ್ದು, ನಿನ್ನೆಯಿಂದಲೇ 2ನೇ ಹಂತದ ಲಾಕ್​ಡೌನ್​ ಆರಂಭವಾಗಿದ್ದು, ಮೇ 3ರವರೆಗೆ ಇಡೀ ರಾಷ್ಟ್ರ ದಿಗ್ಬಂಧನಲ್ಲಿ ಇರಲಿದೆ. ಎರಡನೇ ಹಂತದ ಲಾಕ್​ಡೌನ್​ ಮಾರ್ಗಸೂಚಿಯಲ್ಲಿ ಕೇಂದ್ರ ಸರ್ಕಾರ ಒಂದಿಷ್ಟು ವಿನಾಯಿತಿಗಳನ್ನು ನೀಡಿದೆ. ಸರ್ಕಾರಿ ವಾಹನಗಳು ಹಾಗೂ ಸಾರ್ವಜನಿಕ ಸ್ಥಳಗಳ ತೆರೆಯುವುದನ್ನು ಸರ್ಕಾರ ನಿಷೇಧಿಸಿದೆ. ಏಪ್ರಿಲ್​ 20ರಿಂದ ಕೃಷಿ, ತೋಟಗಾರಿಕೆ ಚಟುವಟಿಕೆಗಳಿಗೆ ಸರ್ಕಾರ ಅನುಮತಿ ಮಾಡಿಕೊಟ್ಟಿದೆ.
ದೇಶಾದ್ಯಂತ ಕರೊನಾ ಸೋಂಕಿತರ ಸಂಖ್ಯೆ 11 ಸಾವಿರ ದಾಟಿದ್ದು, 300ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 250ಕ್ಕೂ ಹೆಚ್ಚಿದ್ದು, ಈವರೆಗೂ 12 ಮಂದಿ ಮೃತಪಟ್ಟಿದ್ದಾರೆ.(ಏಜೆನ್ಸೀಸ್​)
ಕರೊನಾ ಭೀತಿಯ ನಡುವೆಯೇ ಬಾಹ್ಯಾಕಾಶ ಸಂಪನ್ಮೂಲ ಖರೀದಿಗೆ ಆದೇಶ ಹೊರಡಿಸಿದವರು ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 9 =
Remember me
