ಬೆಂಗಳೂರು:ಬೆಳಗ್ಗೆಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಆರು ಹೊಸ ಕರೊನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 232ಕ್ಕೇರಿದೆ.
ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ 17 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆಯ ವೇಗದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆ ಹೊಂದುತ್ತಿರುವವರ ಸಂಖ್ಯೆಯೂ ಏರುತ್ತಿದೆ ಎನ್ನುವುದು ಸಮಾಧಾನದ ಸಂಗತಿ. ಇಲ್ಲಿಯವರೆಗೆ 54 ಮಂದಿ ಬಿಡುಗಡೆ ಹೊಂದಿದ್ದಾರೆ.
ನಿನ್ನೆ ಸಂಜೆ 5 ಗಂಟೆಯಲ್ಲಿ ಇಲ್ಲಿಯವರೆಗೆ ಹೊಸದಾಗಿ ಸೋಂಕು ದಾಖಲಾದ ಊರುಗಳೆಂದರೆ: ವಿಜಯಪುರದಲ್ಲಿ 6, ಬೆಳಗಾವಿಯಲ್ಲಿ 4, ಬೆಂಗಳೂರು ನಗರದಲ್ಲಿ 3, ಕಲಬುರಗಿಯಲ್ಲಿ 3 ಹಾಗೂ ಮೈಸೂರು 1.
ಬೆಂಗಳೂರಿನಲ್ಲಿ ಸದ್ಯ 76 ಸೋಂಕಿತರಿದ್ದು, ಮೈಸೂರಿನಲ್ಲಿ 48, ಬೆಳಗಾವಿಯಲ್ಲಿ 14, ಕಲಬುರಗಿಯಲ್ಲಿ 13, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12, ಬೀದರ್‌ನಲ್ಲಿ 11, ಉತ್ತರ ಕನ್ನಡ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 9, ಬಾಗಲಕೋಟೆಯಲ್ಲಿ 8, ವಿಜಯಪುರ, 6ಬಳ್ಳಾರಿಯಲ್ಲಿ ತಲಾ 6, ಮಂಡ್ಯದಲ್ಲಿ 5, ದಾವಣಗೆರೆ, ಉಡುಪಿಯಲ್ಲಿ ತಲಾ 3, ಧಾರವಾಡದಲ್ಲಿ 2, ಕೊಡಗು, ತುಮಕೂರಿನಲ್ಲಿ ತಲಾ 1, ಬೆಂಗಳೂರು ಗ್ರಾಮಾಂತರದಲ್ಲಿ 4, ಗದಗದಲ್ಲಿ 1 ಸೋಂಕಿತರಿದ್ದಾರೆ.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಲಾಕ್​ಡೌನ್​ನಿಂದ ಹಳ್ಳಿಗಳ ರಸ್ತೆ ಬಂದ್: ಆಸ್ಪತ್ರೆಗೆ ಸಾಗಿಸಲಾಗದೇ ಮಾರ್ಗಮಧ್ಯೆ ವೃದ್ಧೆ ಸಾವು

ಲಾಕ್​ಡೌನ್​ ಪರಿಶೀಲಿಸಲು ಸಿಎಂ ಯಡಿಯೂರಪ್ಪರಿಂದ ನಗರ ಪ್ರದಕ್ಷಿಣೆ: ಧೈರ್ಯ ತುಂಬಿದ ಬಿಎಸ್​ವೈಗೆ ಬೆಸ್ಟ್​ ಸಿಎಂ ಎಂದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 5 =
Remember me
