ಬೆಂಗಳೂರು:ಲಾಕ್ ಡೌನ್ ಆದೇಶವಿದ್ದರೂ‌ ಜನರು ಮಾತ್ರ ಅನಗತ್ಯವಾಗಿ ಹೊರ ಬರುತ್ತಿರುವುದು ನಗರದಲ್ಲಿ ಕಾಣುತ್ತಿದೆ. ಇಂತಹವರನ್ನು ಹೊರಹಾಕಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಮನೆಯಿಂದ ಆಚೆ ಬಂದಿದ್ದ ಯುವಕರನ್ನು ತಡೆದು ಹಿಮ್ಮೆಟ್ಟಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಸಂಜಯ‌ ನಗರ ಭೂಪಸಂದ್ರದಲ್ಲಿ ಘಟನೆ ನಡೆದಿದೆ. ಈ ಸಂಬಂಧ ಇಬ್ಬರನ್ನು‌ ಸಂಜಯ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭೂಪಸಂದ್ರ ಏರಿಯಾವೊಂದರಲ್ಲಿ ತಪಾಸಣೆ ಮಾಡುತ್ತಿದ್ದಾಗ ರಸ್ತೆಯಲ್ಲಿ ಹಲವು ಜನರನ್ನು ಇರುವುದನ್ನು ಕಂಡು ತಿಳುವಳಿಕೆ ಹೇಳಿ ಮನೆ ಹೋಗಿ ಎಂದು ಹೇಳಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಯುವಕರ‌ ನಡುವೆ ಮಾತಿನ ಚಕಮಕಿ ನಡೆದಿದೆ. ನೋಡು ನೋಡುತ್ತಿದ್ದಂತೆ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.
ಸದ್ಯ ಹಲ್ಲೆ ನಡೆಸಿದ ಗುಂಪಿನ ಪೈಕಿ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿ ಸಂಜಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲಾಕ್​ಡೌನ್​ ಆದೇಶ ಧಿಕ್ಕರಿಸಿ ಇಂದು ಅನಾವಶ್ಯಕವಾಗಿ ತಿರುಗಾಡುತ್ತಿದ್ದವರಿಗೆ ಪೊಲೀಸರಿಂದ ಲಾಠಿಚಾರ್ಜ್​

https://www.instagram.com/p/B-J1Ve6n_ft/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + ten =
Remember me
