ಚಿಕ್ಕಮಗಳೂರು:ಹೊಲ – ತೋಟಗಳಿಂದ ಕಟಾವು ಆದ ಕೃಷಿ ಉತ್ಪನ್ನಗಳನ್ನು ನಗರಗಳಿಗೆ ಸಾಗಣೆ ಮಾಡಲು ಯಾವುದೇ ನಿರ್ಬಂಧವೂ ಇಲ್ಲ. ಜಿಲ್ಲಾ- ತಾಲ್ಲೂಕು ಕೇಂದ್ರದಲ್ಲಿ ನೆಲಸಿರುವ ಬೆಳೆಗಾರರು ಹಳ್ಳಿಗಳಲ್ಲಿರುವ ತೋಟಗಳಿಗೆ ತೆರಳಲು ತೊಂದರೆಯಾಗುತ್ತಿದೆ. ಇಂಥವರ ಸಂಚಾರಕ್ಕೆ ಅಡ್ಡಿ ಮಾಡದಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಅಧ್ಯಯನ ಪ್ರವಾಸ ಮಾಡಿದ ನಂತರ ಅವರು ಜಿಲ್ಲಾ ಕೇಂದ್ರದಲ್ಲಿ ಜನಪ್ರತಿನಿಧಿಗಳು – ಅಧಿಕಾರಿಗಳು ಮತ್ತು ರೈತ ಮುಖಂಡರ ಸಭೆ ನಡೆಸಿ ಮತ್ತಷ್ಟು ಮಾಹಿತಿ ಸಂಗ್ರಹಿಸಿ ಮಾತನಾಡಿದರು.
ಕೃಷಿ ಚಟುವಟಿಕೆಗೆ ಪೂರಕವಾದ ಟ್ರಾಕ್ಟರ್ – ಟಿಲ್ಲರ್ – ಬೋರ್ ವೆಲ್ ರಿಪೇರಿ ಅಂಗಡಿಗಳು ತೆರೆದಿರಲು ಅನುಮತಿಯಿದೆ. ಇವರಿಗೆ ನಿರ್ಬಂಧ ಹೇರದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಆದರೆ ಜಿಲ್ಲೆಯಲ್ಲಿ ಸಂಚಾರಕ್ಕೆ ಪಾಸ್ ಪಡೆದಿರುವ ಕೆಲವರು ಅದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಗಮನಕ್ಕೆ ಬಂದಿದೆ. ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಬೇಸಿಗೆ ಮಳೆ ನಂತರ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಆರಂಭವಾಗುತ್ತವೆ. ಇದಕ್ಕೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರ ಇನ್ನಿತರ ಕೃಷಿ ಪರಿಕರಗಳ ದಾಸ್ತಾನಿನಲ್ಲಿ ಕೊರತೆ ಇಲ್ಲ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದರು.
ಮುಖ್ಯಮಂತ್ರಿ ನಿವಾಸದಲ್ಲಿ ಪ್ರತ್ಯಕ್ಷವಾದ ಬೆಕ್ಕಿಗೆ ಹಾಲು ನೀಡಿದ ಸಿಎಂ ಯಡಿಯೂರಪ್ಪ: ವೈರಲ್​ ಆದ ಫೋಟೋ
ಶಾಸಕರೇ ದಯವಿಟ್ಟು ನಮ್ಮನ್ನು ಇಲ್ಲಿಂದ ಕರೆದುಕೊಂಡು ಹೋಗಿ: ಮಹಾರಾಷ್ಟ್ರದಲ್ಲಿ ಸಿಲುಕಿರುವ 200ಕ್ಕೂ ಅಧಿಕ ಕಾರ್ಮಿಕರ ಅಳಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
