ಬೆಂಗಳೂರು:ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕರೊನಾ ಸೋಂಕು 141 ಹೊಸದಾಗಿ ಪತ್ತೆಯಾಗುವ ಮೂಲಕ, ಸೋಂಕಿತರ ಸಂಖ್ಯೆ 2922ಕ್ಕೆ ಏರಿದೆ. ಇವರ ಪೈಕಿ ಅಂತರರಾಜ್ಯ ಪ್ರಯಾಣಿಕರ ಸಂಖ್ಯೆ 90.
ಇದನ್ನೂ ಓದಿ:ದೇವಾಲಯಗಳಲ್ಲಿ ಶೀಘ್ರ ಭಕ್ತರಿಗೆ ಪ್ರವೇಶ; ಮುಂಜಾಗ್ರತಾ ಕ್ರಮಗಳ ಪಟ್ಟಿ ನೀಡಿದ ಧಾರ್ಮಿಕ ದತ್ತಿ ಇಲಾಖೆ
ಈ ಪೈಕಿ ಇಂದು ಆಸ್ಪತ್ರೆಯಿಂದ 103 ಮೂರು ಮಂದಿ ಡಿಸ್ಚಾರ್ಜ್​ ಆಗುವ ಮೂಲಕ ಒಟ್ಟು 997 ಮಂದಿ ಬಿಡುಗಡೆಗೊಂಡಿದ್ದು, 1874 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಓರ್ವ ಸಾವಿಗೀಡಾಗಿದ್ದು ಈವರೆಗೂ ರಾಜ್ಯದಲ್ಲಿ ಕರೊನಾ ಸಾವಿನ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 336 ಸೋಂಕಿತರು ಇಲ್ಲಿಯವರೆಗೆ ಪತ್ತೆಯಾಗಿದ್ದರೆ, ಮಂಡ್ಯದಲ್ಲಿ (ಇಂದು ಒಂದು ಪ್ರಕರಣ ಪತ್ತೆಯಾಗಿಲ್ಲ) 257, ಕಲಬುರಗಿಯಲ್ಲಿ 253, ಯಾದಗಿರಿಯಲ್ಲಿ 241, ಉಡುಪಿಯಲ್ಲಿ 177, ದಾವಣಗೆರೆಯಲ್ಲಿ 150, ಬೆಳಗಾವಿಯಲ್ಲಿ 147, ಹಾಸನದಲ್ಲಿ 157, ಚಿಕ್ಕಬಳ್ಳಾಪುರದಲ್ಲಿ (ಇಂದು ಒಂದು ಪ್ರಕರಣ ಪತ್ತೆಯಾಗಿಲ್ಲ) 136. ರಾಯಚೂರಿನಲ್ಲಿ (ಇಂದು ಒಂದು ಪ್ರಕರಣ ಪತ್ತೆಯಾಗಿಲ್ಲ) 134, ಬೀದರ್​ನಲ್ಲಿ 130 ಹಾಗೂ ದಕ್ಷಿಣ ಕನ್ನಡದಲ್ಲಿ 111 ಸೋಂಕಿತರು ಇದುವರೆಗೆ ಪತ್ತೆಯಾಗುವ ಮೂಲಕ ಒಟ್ಟಾರೆ 12 ಜಿಲ್ಲೆಗಳಲ್ಲಿ ಸೋಂಕು ಶತಕ ಮೀರಿದೆ.
ಇದನ್ನೂ ಓದಿ:ಕೊವಿಡ್-19 ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸೋತಿದೆ; ರಾಜ್ಯಪಾಲರ ತೀವ್ರ ಅಸಮಾಧಾನ, ಟೀಕೆ
ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − two =
Remember me
