ಬೆಂಗಳೂರು:ರಾಜ್ಯದಲ್ಲಿ ಕರೊನಾ ಹೆಮ್ಮಾರಿ ದಿನದಿಂದ ದಿನಕ್ಕೆ ಏರುತ್ತಿದ್ದು, ಸಮಾಧಾನಕರ ಸಂಗತಿಯೆಂದರೆ ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಇಂದು ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆಯವರೆಗೆ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 25 ಹೆಚ್ಚಳವಾಗಿದೆ. ಆದರೆ, ನಿನ್ನೆ 34 ಹಾಗೂ ಮೊನ್ನೆ 41 ಪ್ರಕರಣಗಳು ಒಂದೇ ದಿನದಲ್ಲಿ ಹೆಚ್ಚಳವಾಗಿತ್ತು. ಇಂದು ಕೂಡ ವೈರಸ್‌ ಇನ್ನೊಬ್ಬ ವ್ಯಕ್ತಿಯನ್ನು ಬಲಿ ಪಡೆದಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 14ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 384 ಆಗಿದ್ದು, 104 ಮಂದಿ ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಕರೊನಾ ಹಾಟ್​ಸ್ಟಾಟ್​ ನಂಜನಗೂಡಿನಲ್ಲಿ ಮತ್ತೆ 6 ಹೊಸ ಪ್ರಕರಣಗಳು ವರದಿಯಾಗಿದ್ದು, ಮೈಸೂರು ನಗರದಲ್ಲಿ 1 ಪ್ರಕರಣ ಸೇರಿ ಒಟ್ಟು 7 ಹೊಸ ಪ್ರಕರಣಗಳು ಧೃಡಪಟ್ಟಿವೆ. ಬಾಲಕೋಟೆಯಲ್ಲೂ ಕರೊನಾ ತಾಂಡವವಾಡುತ್ತಿದ್ದು, ಇಲ್ಲೂ ಸಹ 7 ಹೊಸ ಕೇಸ್​ಗಳು ದಾಖಲಾಗಿವೆ. ಉಳಿದಂತೆ ಬೆಂಗಳೂರು ನಗರ 3, ಕಲಬುರಗಿ 2, ವಿಜಯಪುರ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗದಗ, ಮಂಡ್ಯ ಹಾಗೂ ವಿಜಯಪುರದಲ್ಲಿ ತಲಾ ಒಂದೊಂದು ಪ್ರಕರಣಗಳು ವರದಿಯಾಗಿವೆ.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456
ಕರೊನಾ ಕೇಂದ್ರಬಿಂದು ಎನಿಸಿಕೊಂಡಿದ್ದ ಕೇರಳದಲ್ಲಿ ಲಾಕ್​ಡೌನ್​ ಸಡಿಲಗೊಳ್ಳುವುದೇ…. ಸಡಿಲಗೊಂಡರೆ ಏನೆಲ್ಲ ಆಗುತ್ತದೆ….?

ಬೆಂಗ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
