ಬೆಂಗಳೂರು:ಕರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 1ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಪದವಿ ಕಾಲೇಜುಗಳಿಗೆ 15 ದಿನ ರಜೆ ನೀಡಲಾಗಿದೆ. ಆ ಸಮಯದಲ್ಲಿ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೆ, 7ರಿಂದ 10ನೇ ತರಗತಿವರೆಗೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ನಿಗದಿತ ದಿನಾಂಕದಂತೆ ನಡೆಯಲಿವೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಕರೊನಾ ವೈರಸ್ ದಾಳಿಯಿಂದ ಮಕ್ಕಳನ್ನು ರಕ್ಷಿಸಲು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ ವಿದ್ಯಾರ್ಥಿಗಳಿಗೆ ಮಾತ್ರ ಎಲ್​ಕೆಜಿ ಯಿಂದ 6ನೇ ತರಗತಿ ಮಕ್ಕಳಿಗೆ ನೀಡಿದ್ದ ಬೇಸಿಗೆ ರಜೆಯನ್ನು ಶುಕ್ರವಾರ ರಾಜ್ಯಾದ್ಯಂತ ವಿಸ್ತರಿಸಿದೆ. 7ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.14ರಿಂದ ಪರೀಕ್ಷಾ ಪೂರ್ವ ಸಿದ್ಧತಾ ರಜೆ ನೀಡಿ ನಿಗದಿತ ವೇಳಾಪಟ್ಟಿಯಂತೆ ನಡೆಸಿ ಮಾ.23ರೊಳಗೆ ಪೂರ್ಣಗೊಳಿಸಿ ಬೇಸಿಗೆ ರಜೆ ನೀಡುವಂತೆ ಸೂಚನೆ ನೀಡಿದೆ.
ವೇಳಾಪಟ್ಟಿ:ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯು ಈಗಾಗಲೇ ನಿಗದಿಯಾಗಿರುವ ವೇಳಾಪಟ್ಟಿಯಂತೆ ಮಾ.27ರಿಂದ ಏ.9ರವರೆಗೆ ನಡೆಯಲಿದೆ.
15 ದಿನ ರಜೆ:ಕರೊನಾ ಸಾಂಕ್ರಾಮಿಕ ರೋಗವೆಂದು ಘೊಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉನ್ನತ ಶಿಕ್ಷಣ ಇಲಾಖೆ 15 ದಿನ ರಜೆ ಘೊಷಿಸಿ ಪರೀಕ್ಷೆಗಳನ್ನು ಮುಂದೂಡಿದೆ. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯಗಳು, ಪ್ರಥಮ ದರ್ಜೆ ಪದವಿ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳಿಗೆ ಮಾ.14ರಿಂದ 28ರ ವರೆಗೆ ರಜೆ ನೀಡಲಾಗಿದೆ. ಅಲ್ಲದೆ, ಈ ಅವಧಿಯಲ್ಲಿದ್ದ ಪರೀಕ್ಷೆಗಳನ್ನು ಸಹ ಮುಂದೂಡುವಂತೆ ಸೂಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಎಂದಿನಂತೆ ಪಿಯು ಪರೀಕ್ಷೆ:ದ್ವಿತೀಯ ಪಿಯು ಪರೀಕ್ಷೆಗಳು ವೇಳಾಪಟ್ಟಿ ಪ್ರಕಾರವಾಗಿಯೇ ಪರೀಕ್ಷೆ ನಡೆಯಲಿದೆ ಎಂದು ಪಿಯು ನಿರ್ದೇಶಕಿ ಕನಗವಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಆದರೆ, ಪರೀಕ್ಷೆಗಳು ಎಂದಿನಂತೆ ನಡೆಯಲಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳು ಹಾಲಿ ಹೊರಡಿಸಿರುವ ವೇಳಾಪಟ್ಟಿಯಂತೆಯೇ ನಡೆಯಲಿದೆ.
ಬಯೋಮೆಟ್ರಿಕ್ ಸ್ಥಗಿತ
ಬಯೋಮೆಟ್ರಿಕ್ ವ್ಯವಸ್ಥೆಯಿಂದ ಕರೊನಾ ಹರಡುವ ಸಂಭವ ಹೆಚ್ಚಾಗಿರುವುದರಿಂದ ಬಯೋಮೆಟ್ರಿಕ್ ಬಳಕೆ ಸ್ಥಗಿತಗೊಳಿಸುವಂತೆ ತಾಂತ್ರಿಕ ಶಿಕ್ಷಣ ಇಲಾಖೆ ತನ್ನ ವ್ಯಾಪ್ತಿಯಲ್ಲಿರುವ ಸರ್ಕಾರಿ, ಅನುದಾನಿತ, ಇಂಜಿನಿಯರಿಂಗ್, ಪಾಲಿಟೆಕ್ನಿಕ್, ಕಿರಿಯ ತಾಂತ್ರಿಕ ಶಾಲೆಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ. ಇದರಿಂದಾಗಿ ನೌಕರರು ಬಯೋಮೆಟ್ರಿಕ್ ಹಾಜರಾತಿ ಮಾಡುವಂತಿಲ್ಲ. ಇದು ಮಾ.31ರವರೆಗೆ ಜಾರಿಯಲ್ಲಿರಲಿದ್ದು, ಅಲ್ಲಿಯವರೆಗೆ ನೌಕರರು ಹಾಜರಾತಿವಹಿಯಲ್ಲಿ ಮಾತ್ರ ಸಹಿ ಮಾಡಬೇಕೆಂದು ಸೂಚಿಸಿದೆ.
1ರಿಂದ 6ನೇ ತರಗತಿಯವರಿಗೆ ಬೇಸಿಗೆ ರಜೆ ರಾಜ್ಯದ ಎಲ್ಲ ಶಾಲೆಗಳಿಗೂ ಅನ್ವಯ: ಶಿಕ್ಷಣ ಇಲಾಖೆಯ ಹೊಸ ಸುತ್ತೋಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 20 =
Remember me
