ಬೆಂಗಳೂರು:ಕರೊನಾ ಮಟ್ಟಹಾಕುವ ಉದ್ದೇಶದಿಂದ ದೇಶಾದ್ಯಂತ ಜಾರಿ ಗೊಳಿಸಲಾಗಿರುವ ಲಾಕ್​ಡೌನ್ ಉಲ್ಲಂಘಿಸಿ ರಸ್ತೆಯಲ್ಲಿ ಅಡ್ಡಾಡುವವರನ್ನು ಬಂಧಿಸಿ ಜೈಲಿಗಟ್ಟಲು ಸರ್ಕಾರ ಮುಂದಾಗಿದೆ. ನಿರಂತರ ಮನವಿ, ಹಲವು ಎಚ್ಚರಿಕೆಗಳ ಹೊರತಾಗಿಯೂ ಹಲವೆಡೆ ಲಾಕ್​ಡೌನ್ ಉಲ್ಲಂಘನೆ ಮುಂದುವರಿದಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಗುರುವಾರ ಜಿಲ್ಲಾಧಿಕಾರಿ ಗಳ ಜತೆಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಸಿಎಂ ಯಡಿಯೂರಪ್ಪ ಈ ಆದೇಶ ನೀಡಿದರು. ಪಾಸ್ ಹಾಗೂ ತುರ್ತು ಕೆಲಸ ಇರುವವರನ್ನು ಹೊರತುಪಡಿಸಿ ಉಳಿದವರು ಲಾಕ್​ಡೌನ್ ಉಲ್ಲಂಘಿಸುವಂತಿಲ್ಲ. ಇಂತಹವರು ಕಂಡುಬಂದಲ್ಲಿ ಮುಲಾಜಿಲ್ಲದೆ ಬಂಧಿಸಬೇಕು. ಪ್ರಧಾನಮಂತ್ರಿ ಆದೇಶದ ಪ್ರಕಾರ 21 ದಿನಗಳ ಲಾಕ್​ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸಿಎಂ ತಾಕೀತು ಮಾಡಿದರು.
ಕೇರಳಿಗರ ಮೇಲೆ ನಿಗಾ:ಕೇರಳದಿಂದ ವಿಶೇಷವಾಗಿ ಕಾಸರ ಗೋಡು ಮೂಲಕ ಬರುವವರ ಮೇಲೆ ನಿಗಾವಹಿಸಬೇಕು. ಎಲ್ಲ ಜಿಲ್ಲೆಗಳ ಗಡಿ ಮುಚ್ಚಲು ಈಗಾಗಲೇ ಸೂಚಿಸಿದ್ದು, ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಿಎಂ ಸೂಚನೆ ನೀಡಿದರು.
ಮಸೀದಿಯಲ್ಲಿ ಪ್ರಾರ್ಥನೆ ಇಲ್ಲ
ಕರೊನಾ ಹಿನ್ನೆಲೆಯಲ್ಲಿ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದು ಸೂಕ್ತವಲ್ಲ ಎಂಬ ರಾಜ್ಯ ಸರ್ಕಾರದ ಕೋರಿಕೆಗೆ ಮುಸ್ಲಿಂ ಸಮುದಾಯದ ಬೆಂಬಲ ಸಿಕ್ಕಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಜತೆ ನಡೆದ ಸಭೆಯಲ್ಲಿ ಈಗಾಗಲೇ ಪ್ರಾರ್ಥನೆ ನಡೆಸದಿರುವ ಕುರಿತು ನಿರ್ಧಾರ ಕೈಗೊಂಡಿರುವುದಾಗಿ ಮುಸ್ಲಿಂ ಧರ್ಮಗುರುಗಳು ಸ್ಪಷ್ಟಪಡಿಸಿದರು.
ಕರೊನಾ ಲಾಕ್​ಡೌನ್: ಪೊಲೀಸ್​ ಸಿಬ್ಬಂದಿಯ ಕಣ್ಣಲ್ಲಿ ನೀರು ಹಾಕಿಸಿದ ಸಾರ್ವಜನಿಕರು…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
