ಭಟ್ಕಳ:ಕಾಯಿಲೆಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದರೂ ಕರೊನಾದಿಂದಲೇ ಮೃತಪಟ್ಟಿದ್ದಾರೆ ಎಂದು ತಾಲೂಕು ಆಡಳಿತಕ್ಕೆ ದೂರು ನೀಡಿ ಶವವನ್ನು ಸ್ಥಳೀಯರು ಮುಟ್ಟದೆ ಪುರಸಭೆ ಕಾರ್ವಿುಕರೇ ಬಂದು ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದ ಪ್ರಕರಣ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ.
ಸೋನಾರಕೇರಿ ನಿವಾಸಿ ಗೀತಾ ಮೋಹನ ಶೇಟ್(55) ಸೋಮವಾರ ಮನೆಯಲ್ಲೇ ಮೃತಪಟ್ಟಿದ್ದರು. ಸುಟ್ಟ ಗಾಯಗಳಿಂದಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಕೆ, ಕರೊನಾ ಪಸರಿಸುವ 15 ದಿನಗಳ ಹಿಂದೆ ಡಿಸ್ಚಾರ್ಜ್ ಆಗಿ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಿದ್ದರು. ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ ಮಹಿಳೆ ಮೃತಪಟ್ಟರು. ಇದರಿಂದ ಆತಂಕಗೊಂಡ ಗ್ರಾಮಸ್ಥರು ಮಹಿಳೆಗೆ ಕರೊನಾ ಇದೆ ಶಂಕಿಸಿ ತಾಲೂಕಾಡಳಿತಕ್ಕೆ ದೂರು ನೀಡಿದರು. ಇವರಲ್ಲಿ ಕರೊನಾದ ಯಾವುದೇ ಲಕ್ಷಣಗಳಿಲ್ಲ ಎಂದು ವೈದ್ಯರು ಹೇಳಿದರೂ ಕೇಳಲಿಲ್ಲ. ಕೊನೆಗೆ ಆಕೆಯ ಪತಿಯನ್ನು ಕ್ವಾರಂಟೈನ್ ಮಾಡಿ, ಶವದ ಕಫ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಬುಧವಾರ ವರದಿ ನೆಗೆಟಿವ್ ಬಂದಿದ್ದು, ಸಂಜೆ ಅಂತ್ಯಕ್ರಿಯೆ ನೇರವೇರಿಸಲಾಯಿತು.
ಮೈಸೂರಿನಿಂದ ಚಿಕ್ಕಮಗಳೂರಿಗೆ ನಡ್ಕೊಂಡು ಬಂದ ಯುವಕನ ವಿಷಸೇವನೆ ಪ್ರಹಸನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
