ಬೆಂಗಳೂರು:ಕಾರ್ವಿುಕರಿಗೆ 2,000 ರೂ. ಸಹಾಯ ಧನ, ಬಡ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ಹಾಲು ವಿತರಣೆ ಹಾಗೂ ರೈತರು ಬೆಳೆದ ಬೆಳೆ, ಹಣ್ಣು, ತರಕಾರಿ ಮಾರಾಟಕ್ಕೆ ವ್ಯವಸ್ಥೆಗೆ ಕ್ರಮವಹಿಸಲಾಗಿದ್ದು, ರಾಜ್ಯದ ಪರಿಸ್ಥಿತಿಗೆ ಅನುಗುಣವಾಗಿ ಇನ್ನುಳಿದ ವಿಷಯಗಳ ಬಗ್ಗೆ ಕ್ರಮವಹಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಲಾಕ್​ಡೌನ್ ಹಿನ್ನೆಲೆಯಲ್ಲಿ ಉಂಟಾಗಿರುವ ಸಂಕಷ್ಟ ನಿವಾರಣೆಗೆ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬರೆದ ಪತ್ರಕ್ಕೆ ಉತ್ತರ ನೀಡಿರುವ ಅವರು, ಕಾರ್ವಿುಕರಿಗೆ 1,000 ರೂ ಅಲ್ಲ 2,000 ರೂ. ಸಹಾಯಧನ ನೀಡಲಾಗಿದೆ. ಸದ್ಯಕ್ಕೆ ಆರ್ಥಿಕ ಪರಿಸ್ಥಿತಿ ಸರಿ ಇರದ ಕಾರಣ 5,000 ರೂ. ನೀಡುವುದು ಕಷ್ಟ ಸಾಧ್ಯ ಎಂದಿದ್ದಾರೆ. ರೈತರು ಬೆಳೆದ ಬೆಳೆ, ಹಣ್ಣು, ತರಕಾರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದ್ದು, 500 ಹಾಪ್ ಕಾಮ್ಸ್ಗಳು ಸೂಕ್ತ ದರದಲ್ಲಿ ಖರೀದಿಸಿ ನೇರ ಗ್ರಾಹಕರಿಗೆ ಮಾರಾಟ ಮಾಡುವ ಕ್ರಮವಹಿಸಲಾಗಿದೆ. ಪತ್ರದಲ್ಲಿ ಪ್ರಸ್ತಾಪಿಸಿದ ಇನ್ನುಳಿದ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ತಕ್ಕಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದು, ಸರ್ಕಾರ ಕೈಗೊಂಡ ಕ್ರಮಗಳನ್ನು ಬೆಂಬಲಿಸಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ನೌಕರರ ಸಂಘಕ್ಕೆ ಸಿಎಂ ಧನ್ಯವಾದ
ಕರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರು ಒಂದು ದಿನದ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿರುವುದನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಶ್ಲಾಘಿಸಿ, ಧನ್ಯವಾದ ಸಲ್ಲಿಸಿದ್ದಾರೆ. ರಾಜ್ಯದ ಸರ್ಕಾರಿ ನೌಕರರು ಅತಿವೃಷ್ಟಿ, ಅನಾವೃಷ್ಟಿ, ಪ್ರಕೃತಿ ವಿಕೋಪ ಸಂಭವಿಸಿದಾಗ ಸರ್ಕಾರಕ್ಕೆ ಹಲವಾರು ಸಂದರ್ಭಗಳಲ್ಲಿ ಸಹಕಾರ ನೀಡಿರುವುದನ್ನೂ ಸಿಎಂ ಸ್ಮರಿಸಿದ್ದಾರೆ.
ಆಗಾಗ ಕೈತೊಳೆಯುವ ಸರಳ ಅಭ್ಯಾಸವೇ ಕರೊನಾದಿಂದ ರಕ್ಷಣೆ ಪಡೆಯುವ ತಂತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − three =
Remember me
