ಕಲಬುರಗಿ:ಕರೊನಾ ವೈರಸ್​ನಿಂದ ವೃದ್ಧರೊಬ್ಬರು ಮೃತಪಟ್ಟಿರುವುದು ದೃಢವಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಶರತ್​. ಬಿ ಗುರುವಾರ ರಾತ್ರಿ ಸ್ಪಷ್ಟನೆ ನೀಡಿದ್ದಾರೆ. ಇದು ಕರ್ನಾಟಕ ಮಾತ್ರವಲ್ಲದೆ, ಭಾರತದಲ್ಲೇ ಮೊದಲ ಪ್ರಕರಣವಾಗಿದೆ.
ಕಲಬುರಗಿ ನಗರದ ನಿವಾಸಿ ಮಹಮ್ಮದ್ ಹುಸೇನ್ ಸಿದ್ದಿಕಿ ( 76) ಮೃತ. ಹೈದರಾಬಾದ್​ ಆಸ್ಪತ್ರೆಯಲ್ಲಿ ಮಂಗಳವಾರ ಸಾವಿಗೀಡಾಗಿದ್ದರು.
ದುಬೈನಿಂದ ಆಗಮಿಸಿದ್ದ ಸಿದ್ದಿಕಿ ಕೆಮ್ಮಿನಿಂದ ಬಳಲುತ್ತಿದ್ದರು. ಮೊದಲು ಕಲಬುರಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿಂದ ಅವರನ್ನು ಹೈದರಾಬಾದ್​ಗೆ ಕರೆದುಕೊಂಡು ಹೋಗಲಾಗಿತ್ತು.
ಈ ಕುರಿತು ಸಚಿವ ಶ್ರೀರಾಮುಲು ಅವರು ಟ್ವೀಟ್​ ಮಾಡಿ, ಕಲಬುರ್ಗಿಯಲ್ಲಿ ಮೊನ್ನೆ ಮೃತಪಟ್ಟ 76 ವರ್ಷದ #COVID19 ಶಂಕಿತರಿಗೆ ಸೋಂಕು ತಗಲಿದ್ದು ಖಚಿತವಾಗಿದೆ. ಇವರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ಪ್ರತ್ಯೇಕವಾಗಿರಿಸಲು ನಿಗಾವಹಿಸಲಾಗಿದೆ ಎಂದಯ ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಮೊನ್ನೆ ಮೃತಪಟ್ಟ 76 ವರ್ಷದ#COVID19ಶಂಕಿತರಿಗೆ ಸೋಂಕು ತಗಲಿದ್ದು ಖಚಿತವಾಗಿದೆ. ಇವರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ಪ್ರತ್ಯೇಕವಾಗಿರಿಸಿ ನಿಗಾವಹಿಸಲಾಗಿದೆ.
— B Sriramulu (@sriramulubjp)March 12, 2020

VIDEO| ಕರೊನಾ ಭೀತಿ: ಇಟಲಿಯಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಸಚಿವ ಶ್ರೀರಾಮುಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 19 =
Remember me
