ಬೆಂಗಳೂರು: ರಾಜ್ಯದಲ್ಲಿ ನಾಲ್ವರಿಗೆ ಕೊರೊನಾ ವೈರಸ್​ ಸೋಂಕು ಹರಡಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
ನಾಲ್ವರಲ್ಲಿ ಸೋಂಕು ಹರಡಿರುವುದನ್ನು ಸಚಿವರು ಟ್ವೀಟ್​ ಮಾಡಿ ದೃಢಪಡಿಸಿದ್ದಾರೆ. 4 ಮಂದಿಯಲ್ಲಿ ಕೋವಿಡ್​ 19 ಸೋಂಕು ಹರಡಿರುವುದು ದೃಢಪಟ್ಟಿದೆ. ಸೋಂಕು ಪೀಡಿತರನ್ನು ಹಾಗೂ ಅವರ ಕುಟುಂಬದವರನ್ನು ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಅವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಸಾರ್ವಜನಿಕರು ಸೋಂಕು ಹರಡದಂತೆ ಮುಂಜಾಗೃತೆ ವಹಿಸಬೇಕು. ನಾಲ್ವರಿಗೂ ರಾಜೀವ್​ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಸಚಿವರು ಟ್ವೀಟ್​ ಮಾಡಿದ್ದಾರೆ.
ದುಬೈನಿಂದ ಬೆಂಗಳೂರಿಗೆ ಆಗಮಿಸಿದ ಟೆಕ್ಕಿಗೆ ಸೋಂಕು ಇರುವುದು ಪತ್ತೆಯಾಯಿತು. ಈಗ ನಾಲ್ವರಿಗೆ ಸೋಂಕು ಹರಡಿರುವುದನ್ನು ಆರೋಗ್ಯ ಸಚಿವರು ದೃಢಪಡಿಸಿದ್ದಾರೆ.
ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ#COVID19ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ#CoronavirusOutbreak
— B Sriramulu (@sriramulubjp)March 10, 2020

VIDEO| ಕೊರೊನಾ ವೈರಸ್​ ಪೀಡಿತ ಟೆಕ್ಕಿ ಸಂಪರ್ಕಕ್ಕೆ ಬಂದವರ ತಪಾಸಣೆ: ರಾಜೀವ್​ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 11 =
Remember me
