ಬೆಂಗಳೂರು:ಕಿಲ್ಲರ್​ ಕರೊನಾ ವೈರಸ್​ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 489ಕ್ಕೆ ಏರಿದ್ದು, ಈವರೆಗೆ 153 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ 15 ಹೊಸ ಕೇಸುಗಳು ಪತ್ತೆಯಾಗಿವೆ. ಈ ಪೈಕಿ ಅತ್ಯಧಿಕ ಮಂದಿ 20ರ ಮೇಲ್ಪಟ್ಟು ಹಾಗೂ 40 ವರ್ಷ ಒಳಗಿರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ, 17, 18ನೇ ವಯಸ್ಸಿನ ಇಬ್ಬರಲ್ಲೂ ಕೋವಿಡ್​-19 ಪತ್ತೆಯಾಗಿದೆ. ಬೆಳಗಾವಿಯ ಹೀರೆಬಾಗೇವಾಡಿ ಹಾಗೂ ಬೆಂಗಳೂರಿನಲ್ಲಿ ತಲಾ 6 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದನ್ನು ಹೊರತುಪಡಿಸಿದರೆ ಬೆಳಗಾವಿ ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ತಲಾ ಒಂದೊಂದು ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.
ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿದೆ. ಈ ಪೈಕಿ 153 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ 18 ಮಂದಿ ಮೃತಪಟ್ಟಿದ್ದಾರೆ.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಕಿಡ್ನಿ ವೈಫಲ್ಯದಿಂದ ದೆಹಲಿ ಝೂನಲ್ಲಿ ಮೃತಪಟ್ಟ ಬಿಳಿಹುಲಿಗೂ ಕರೊನಾ ಸೋಂಕಿತ್ತಾ? ಪರೀಕ್ಷಾ ವರದಿಯಲ್ಲಿ ಏನಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 6 =
Remember me
