ಬೆಂಗಳೂರು:ರಾಜ್ಯದ ಜನತೆಗೆ ಕರೊನಾ ಸೋಂಕಿನ ವಿಚಾರದಲ್ಲಿ ಇಂದಿನ ಭಾನುವಾರ ಕೊಂಚ ನಿರಾಳತೆಯನ್ನು ತಂದಿದೆ. ಇಂದು 1 ಹೊಸ ಪ್ರಕರಣ ಮಾತ್ರ ಪತ್ತೆಯಾಗಿದೆ. ಆಶಾದಾಯ ಬೆಳವಣಿಗೆಯೆಂದರೆ ಈವರೆಗೆ 177 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.
ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ ಕೇವಲ 1 ಪ್ರಕರಣ ಬೆಳಕಿಗೆ ಬಂದಿದ್ದು, ಸೋಂಕಿತ ವ್ಯಕ್ತಿ ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನವರಾಗಿದ್ದಾರೆ. ಇಷ್ಟು ದಿನ ಎರಡು ಅಂಕಿಯಲ್ಲಿದ್ದ ಪ್ರಕರಣಗಳು ಇದೀಗ ಒಂದಂಕಿಗೆ ಬಂದಿರುವುದು ರಾಜ್ಯದ ಜನತೆಗೆ ಖುಷಿಯ ವಿಚಾರವಾಗಿದೆ.
ನಿನ್ನೆ ಸೋಕಿತರ ಪ್ರಕರಣ 500 ಇತ್ತು. ಇಂದಿನ ಒಂದು ಕೇಸ್​ ಸೇರಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 501ಕ್ಕೆ ಏರಿದೆ. ಈ ಪೈಕಿ 177 ಮಂದಿಯನ್ನು ಬಿಡುಗಡೆ ಮಾಡಲಾಗಿದ್ದು, ಇಲ್ಲಿಯವರೆಗೆ 18 ಮಂದಿ ಮೃತಪಟ್ಟಿದ್ದಾರೆ.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.

VIDEO| ಲಾಕ್​ಡೌನ್​ ನಡುವೆ 17ನೇ ಮಹಡಿಯಿಂದ ಬಿದ್ದು ಸಾಯಲು ಹೊರಟ್ಟಿದ್ದ ಯುವತಿ ಬಚಾವ್​ ಆಗಿದ್ದು ಹೇಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
