ಬೆಂಗಳೂರು:ಮಹಾಮಾರಿ ಕರೊನಾ ವೈರಸ್​ ತಡೆಗಟ್ಟಲು ರಾಜ್ಯದಲ್ಲಿ ಲಾಕ್​ಡೌನ್​ ಹೇರಲಾಗಿದೆ. ಈ ಮಧ್ಯೆಯೂ ನೆರವೇರಿದ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್​ ಮದುವೆ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಎಚ್​ಡಿಕೆ ಪರ ಬ್ಯಾಟ್​ ಬೀಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ನಿಖಿಲ್​-ರೇವತಿ ಮದುವೆ ವಿಚಾರ ಪ್ರಸ್ತಾಪಿಸಿ, ಅನುಮತಿಯನ್ನು ಪಡೆದೇ ವಿವಾಹ ಮಾಡಿದ್ದಾರೆ. ಕರೊನಾ ಹಿನ್ನೆಲೆಯಲ್ಲಿ ನಿಯಮದ ಪ್ರಕಾರವೇ ಕಡಿಮೆ ಜನರನ್ನು ಸೇರಿಸಿ ಮದುವೆ ಕಾರ್ಯ ನಡೆಸಿದ್ದು, ಅವರಿಗೆ ಧನ್ಯವಾದ ತಿಳಿಸುತ್ತೇನೆಂದರು.
ನಿನ್ನೆಯಷ್ಟೇ ರಾಮನಗರದ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಎಚ್​ಡಿಕೆ ಪುತ್ರ ನಿಖಿಲ್ ಅವರು ರೇವತಿಯನ್ನು ವರಿಸಿದರು. ಮದುವೆಯಲ್ಲಿ ಕರೊನಾ ಮುಂಜಾಗ್ರತಾ ಕ್ರಮಗಳನ್ನು ಅನುಸಿದರೂ ಕೂಡ ಕೆಲ ಸಂದರ್ಭದಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್​ ಧರಿಸಿದೇ ಇರುವುದು ಕಂಡುಬಂದಿದ್ದು, ತೀವ್ರ ಟೀಕೆಗೆ ಗುರಿಯಾಗಿತ್ತು. ರಾಷ್ಟ್ರೀಯ ಮಾಧ್ಯಮಗಳಲ್ಲೂ ಈ ಬಗ್ಗೆ ಚರ್ಚೆಯಾಗಿತ್ತು.
ರಾಮನಗರದಲ್ಲಿ ನಿಖಿಲ್-ರೇವತಿ ಅದ್ದೂರಿ ವಿವಾಹ: ಲಾಕ್‌ಡೌನ್ ನಿಯಮಗಳ ಉಲ್ಲಂಘನೆ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + twelve =
Remember me
