ಬೆಂಗಳೂರು:ಕರೊನಾವೈರಸ್ ಆತಂಕ ಸಚಿವರನ್ನು ಕಾಡಲಾರಂಭಿಸಿದ್ದು, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್​ ಸ್ವಯಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.
ರಾಮನಗರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ವತ್ಥನಾರಾಯಣ, ಖಾಸಗಿ ವಾಹಿನಿ ಕ್ಯಾಮರಾಮನ್​ಗೆ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದರು. ಈಗ ಆ ಕ್ಯಾಮರಾಮೆನ್​ಗೆ ಪಾಸಿಟಿವ್ ಬಂದಿರುವುದರಿಂದ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.
ಈಗಾಗಲೆ ಒಮ್ಮೆ ಕರೊನಾ ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ಬಂದಿದೆ. ಆದರೂ ಮತ್ತೊಮ್ಮೆ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಕರೊನಾ ಪರೀಕ್ಷೆಗೆ ಒಳಗಾಗಿದ್ದು, ಅವರ ವರದಿಯೂ ನೆಗೆಟಿವ್ ಬಂದಿದೆ. ಆದರೂ ಅವರು ಕ್ವಾರಂಟೈನ್​ಗೆ ಒಳಪಡಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.
I have taken a swab test and it has come negative. I am under self quarantine and I am healthy.#Covid19
ನಾನು ಕೋವಿಡ್-19 ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದು ಅದು ನೆಗೆಟಿವ್ ಬಂದಿರುತ್ತದೆ, ನಾನು ಆರೋಗ್ಯದಿಂದಿದ್ದು, ಸ್ವತಃ ಕ್ವಾರೆಂಟೈನ್ ಗೆ ಒಳಗಾಗಿದ್ದೇನೆ.
— Basavaraj S Bommai (@BSBommai)April 29, 2020

ಕೋವಿಡ್19 ಪಾಸಿಟಿವ್ ಬಂದಿರುವ ಟಿವಿ ಪತ್ರಕರ್ತರ ಜೊತೆ ನಾನು ಕೂಡ ಸಂಪರ್ಕಕ್ಕೆ ಬಂದಿರುವ ವಿಷಯ ಗೊತ್ತಾದ ಹಿನ್ನಲೆಯಲ್ಲಿ, ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೇನೆ, ನೆಗೆಟಿವ್ ಬಂದಿದೆ. ಹಾಗಿದ್ದರೂ, ಮುನ್ನೆಚ್ಚರಿಕೆಯಿಂದ 7 ದಿನ ನನ್ನ ಮನೆಯಲ್ಲೆ ಕ್ವಾರಂಟೈನ್ ನಲ್ಲಿರಲು ನಿರ್ಧರಿಸಿದ್ದೇನೆ, ಅಲ್ಲಿಂದಲೇ ಕರ್ತವ್ಯವನ್ನು ನಿರ್ವಹಿಸುತ್ತೇನೆ.
— Dr Sudhakar K (@mla_sudhakar)April 29, 2020

ನಿಖಿಲ್ ಮದುವೆಗೆ ನೀಡಿದ ಪಾಸ್ ಕುರಿತು ಇನ್ನೂ ಏಕೆ ವರದಿ ಸಲ್ಲಿಸಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eight =
Remember me
