ಬೆಂಗಳೂರು:ನಗರದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದ್ದು, ಇದೀಗ ರ್ಯಾಂಡಂ ಪರೀಕ್ಷೆಯಲ್ಲಿ ಸೋಂಕಿತ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ಪಾದರಾಯನಪುರ ಗಲಭೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಯನ್ನು ಕರೊನಾ ತಪಾಸಣೆಗೆ ಒಳಪಡಿಸಿದಾಗ ವರದಿ ನೆಗೆಟಿವ್ ಬಂದಿದೆ. ಆದರೆ, ಆತನ ಗರ್ಭಿಣಿ ಪತ್ನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ನಗರದ ಪಾದರಾಯನಪುರ ಹಾಗೂ ಹೊಂಗಸಂದ್ರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದ ಹಿನ್ನೆಲೆಯಲ್ಲಿ ಗುರುವಾರ ಈ ಎರಡೂ ಪ್ರದೇಶಗಳಲ್ಲಿ ರ್ಯಾಂಡಂ ಪರೀಕ್ಷೆ ನಡೆಸಲಾಗಿತ್ತು. ಇದರಿಂದ 16 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿರುವುದು ಜನರ ಭೀತಿಗೆ ಕಾರಣವಾಗಿದೆ.
ಪಾದರಾಯನಪುರದ ಅಲ್ಲಲ್ಲಿ 48 ಮಂದಿಯ ಗಂಟಲದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿತ್ತು. ಇಬ್ಬರು ಗರ್ಭಿಣಿಯರು ಸೇರಿ 16 ಮಂದಿ ಕರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಗರ್ಭಿಣಿ ಮಹಿಳೆ ಚಾಮರಾಜಪೇಟೆಯ ಬಿಬಿಎಂಪಿ ಆಸ್ಪತ್ರೆಯಲ್ಲಿ ನಿಯಮಿತ ತಪಾಸಣೆಗೆ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಮುಚ್ಚಲಾಗಿದ್ದು, ಅಲ್ಲಿದ್ದ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯನ್ನು ಸಂಪೂರ್ಣ ಸ್ಯಾನಿಟೈಸೇಷನ್ ಮಾಡಿ 24 ಗಂಟೆಗಳ ನಂತರ ತೆರೆಯಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಪಾದರಾಯನಪುರದಲ್ಲಿ ಗಲಭೆಯಲ್ಲಿ ಪಾಲ್ಗೊಂಡಿದ್ದ ಆರೋಪದಲ್ಲಿ ಗರ್ಭಿಣಿಯ ಪತಿ ಬಂಧಿತನಾಗಿದ್ದ. ಆದರೆ ಆತನಿಗೆ ಪರೀಕ್ಷೆ ನಡೆಸಿದ್ದ ವೇಳೆ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಇದೀಗ ನಡೆಸಿದ ರ್ಯಾಂಡಂ ಪರೀಕ್ಷೆಯಲ್ಲಿ ಆತನ ಪತ್ನಿಗೆ ಸೋಂಕು ದೃಢಪಟ್ಟಿದೆ.
ಹೊಂಗಸಂದ್ರದಲ್ಲಿ ಮೂವರಿಗೆ ಕೋವಿಡ್
ಬಿಹಾರಿ ಕಾರ್ವಿುಕನಿಂದ ಆತಂಕ ಸೃಷ್ಟಿಸಿದ್ದ ಹೊಂಗಸಂದ್ರದಲ್ಲಿ ಆತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದಿದ್ದ 190 ಮಂದಿಯ ಗಂಟಲದ್ರವ ಪರೀಕ್ಷೆ ನಡೆಸಲಾಗಿದ್ದು, ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತ ಬಿಹಾರಿ ಕಾರ್ವಿುಕನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಇತರೆ ನಾಲ್ವರು ಸೋಂಕಿತರು ಸೇರಿ ಐದು ಮಂದಿ ಗುಣಮುಖರಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ 12 ದಿನಗಳ ನಂತರ ಎರಡು ಬಾರಿ ಸ್ವಾಬ್ ಪಡೆದು ಪರೀಕ್ಷೆಗೆ ಒಳಪಡಿಸಿ ವರದಿಯಲ್ಲಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಬಿಡುಗಡೆಯಾದ ಐವರನ್ನು ಗುರುವಾರ ರಾತ್ರಿ ಆರೋಗ್ಯ ಸಿಬ್ಬಂದಿ ಹೊಂಗಸಂದ್ರಕ್ಕೆ ಬಿಟ್ಟು ಬಂದಿದ್ದರು. ಇನ್ನೂ 14 ದಿನ ಅವರು ಮನೆಯಲ್ಲಿ ಕ್ವಾರಂಟೈನ್ ಆಗಬೇಕಿತ್ತು. ಆದರೆ, ಇರಲು ಸೂಕ್ತ ನೆಲೆ ಇಲ್ಲದ ಕಾರಣ ಅವರೆಲ್ಲಾ ರಸ್ತೆಯಲ್ಲೇ ಉಳಿದಿದ್ದರು. ಇದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದ್ದಲ್ಲದೇ ಜಾಲತಾಣಗಳಲ್ಲಿ ದೃಶ್ಯ ವೈರಲ್ ಆಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ನಗರ ಆರೋಗ್ಯಾಧಿಕಾರಿ ಐವರನ್ನು ವಶಕ್ಕೆ ಪಡೆದು ಇನ್ನೂ 14 ದಿನಗಳವರೆಗೆ ಹೊಟೇಲ್​ನಲ್ಲಿ ಕ್ವಾರಂಟೈನ್ ಮಾಡಿದ್ದಾರೆ.
ಬಿಎಸ್​ವೈ ಎರಡನೇ ಪ್ಯಾಕೇಜ್? ನೆರವು ವಂಚಿತ 10 ಲಕ್ಷ ಫಲಾನುಭವಿಗಳತ್ತ ಸರ್ಕಾರ ಚಿತ್ತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 4 =
Remember me
