ಬೆಳಗಾವಿ:ದೇಶದಲ್ಲಿ ಮಾರಕ ಕರೊನಾ ವೈರಸ್ ಹಲವಾರು ಕಡೆಗಳಲ್ಲಿ ಹರಡುತ್ತಿರುವುದರಿಂದ ಶ್ರೀಶೈಲದ ಯುಗಾದಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸುವ ಭಕ್ತರು ತಮ್ಮ ಯಾತ್ರೆಯನ್ನು ಸ್ಥಗಿತಗೊಳಿಸಬೇಕೆಂದು ಶ್ರೀ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕರೊನಾ ಸೋಂಕು ಒಂದು ಮಾರಣಾಂತಿಕ ರೋಗಾಣು ಆಗಿದ್ದು, ಸೋಂಕು ತಗುಲಿದ ಒಬ್ಬ ವ್ಯಕ್ತಿ, ಸಾವಿರ ಜನರು ಒಂದೆಡೆ ಸೇರಿದ ಪ್ರದೇಶಲ್ಲಿ ಮಧ್ಯದಲ್ಲಿ ಬಂದು ಸೀನಿದರೆ ಅಥವಾ ಕೆಮ್ಮಿದರೆ ಅವನಿಂದ ಇನ್ನೊಬ್ಬರಿಗೆ, ಅವನಿಂದ ಮತ್ತೊಬ್ಬನಿಗೆ ಹೀಗೆ ಕ್ರಮೇಣ ಆ ಸಾವಿರ ಜನರಿಗೂ ತಗುಲುವ ಸಾಧ್ಯತೆ ಇರುತ್ತದೆ. ಈ ಸೋಂಕು ತಗುಲಿದ ನಂತರ ಇದನ್ನು ತಡೆಗಟ್ಟಲು ಯಾವುದೇ ಔಷದ ಇಲ್ಲದ ಕಾರಣ ಇದು ಎಲ್ಲಿಯೂ ಹರಡದಂತೆ ಇದರ ವಿರುದ್ಧ ಹೋರಾಡುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ದೇವಸ್ಥಾನಗಳು ಭಾರತ ದೇಶದ ಮನುಕುಲದ ಕಲ್ಯಾಣ ಕೇಂದ್ರಗಳಾಗಿದ್ದು, ಇವು ಮನುಷ್ಯರ ಮಾರಣ ಹೋಮಕ್ಕೆ ಕಾರಣವಾಗಬಾರದು. ಆದ್ದರಿಂದ ಭಾವಾವೇಶಕ್ಕೆ ಒಳಗಾಗಿ ವಾಸ್ತವಿಕ ಪರಿಸ್ಥಿತಿಯನ್ನು ಅಲಕ್ಷಿಸಿ ಭಕ್ತಿಯ ಹೆಸರಿನಲ್ಲಿ ಹುಚ್ಚು ಧೈರ್ಯವನ್ನು ಪ್ರದರ್ಶಿಸಲು ಪ್ರಯತ್ನಿಸದೇ ಎಲ್ಲ ಭಕ್ತರು ತಮ್ಮ ಶ್ರೀಶೈಲ ಯಾತ್ರೆಯನ್ನು ಸ್ಥಗಿತಗೊಳಿಸುವುದು ಸೂಕ್ತ ಎಂದು ತಿಳಿಸಿದರು.
ಈಗಾಗಲೇ ಪಾದಯಾತ್ರೆಯ ಮೂಲಕ ಶ್ರೀಶೈಲಕ್ಕೆ ಹೊರಟು ಮಾರ್ಗಮಧ್ಯದಲ್ಲಿ ಇರುವವರು ಕೂಡ ಮರಳಿ ಬರುವುದು ಒಳ್ಳೆಯದು ಅಥವಾ ವಾಹನಗಳ ಮೂಲಕ ನೇರವಾಗಿ ಕ್ಷೇತ್ರಕ್ಕೆ ಹೋಗಿ ದೇವರ ದರ್ಶನ ಪಡೆದು ತಕ್ಷಣ ಮರಳಿ ತಮ್ಮ ತಮ್ಮ ಗ್ರಾಮಕ್ಕೆ ಬರುವುದು ಉತ್ತಮ. ಅನೇಕರು ಕಂಬಿಗಳನ್ನು ತೆಗೆದುಕೊಂಡು ಹೊರಟವರು ಮರಳಿ ಬರಲು ಸಾಧ್ಯವಿಲ್ಲದವರು ದಾರಿಯಲ್ಲಿ ವೈದ್ಯರ ಸಲಹೆ ಪಡೆದು ಕರೊನಾ ಸೋಂಕು ತಗಲದಿರುವ ಎಚ್ಚರಿಕೆಯ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸುತ್ತ ಶ್ರೀಶೈಲಕ್ಕೆ ಹೋಗಿ ತಮ್ಮ ಪ್ರಾಚೀನ ಪಾರಂಪರಿಕ ವಿಧಿವಿಧಾನಗಳನ್ನು ಪೂರೈಸಿ ಆದಷ್ಟು ಶೀಘ್ರ ಶ್ರೀಶೈಲದಿಂದ ಹೊರಟು ತಮ್ಮ ತಮ್ಮ ಊರುಗಳನ್ನು ಸೇರಬೇಕು ಎಂದರು.
ಶ್ರೀಶೈಲಕ್ಕೆ ಜಾತ್ರೆಗೆ ಬರುವ ಭಕ್ತರೆಲ್ಲರ ಅನುಕೂಲ ಮತ್ತು ಸಂತೋಷಕ್ಕಾಗಿ ಶ್ರೀಶೈಲ ಪೀಠದಿಂದ ದಿ. 19 ರಿಂದ 23 ರವರೆಗೆ ಐದು ದಿನಗಳ ಕಾಲ “ಮಲ್ಲಯ್ಯನ ಭಕ್ತ ಬೃಹತ್ ಸಮಾವೇಶ” ಮತ್ತು ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಯೋಜಿಸಿ ದಿ 21ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಆಹ್ವಾನಿಸಲಾಗಿತ್ತು. ಆದರೆ ಈ ಮಾರಣಾಂತಿಕ ಕರೊನಾ ಕಾರಣದಿಂದ ಸಂಪೂರ್ಣ ಈ ಕಾರ್ಯಕ್ರಮವನ್ನೇ ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು.
ಯುಗಾದಿಯ ಸಂದರ್ಭದಲ್ಲಿ ಪ್ರತಿವರ್ಷ ಕರ್ನಾಟಕದಿಂದ ಹತ್ತು ಲಕ್ಷಕ್ಕಿಂತ ಹೆಚ್ಚು ಜನರು ಶ್ರೀಶೈಲದಲ್ಲಿ ಸೇರುತ್ತಾರೆ. ಇದೀಗ ಕರೊನಾ ವೈರಸ್ ಬಗ್ಗೆ ಎಷ್ಠೇ ಜಗೃತಿ ಮೂಡಿಸಿದರೂ, ಬರುವವರನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಕರ್ನಾಟಕ ಸರ್ಕಾರವು ಈ ಸಮಯದಲ್ಲಿ ಶ್ರೀಶೈಲಕ್ಕೆ ವೈದ್ಯರ ತಂಡ ಮಾಸ್ಕ್ ಮತ್ತು ಔಷಧ ಇತ್ಯಾದಿಗಳನ್ನು ಕಳುಹಿಸಿ ಅಲ್ಲಿ ಬರುವ ಜನರಿಗೆ ಕರೋನಾ ಹರಡದಂತೆ ಮುನ್ನೆಚ್ಚರಿಕೆ ವ್ಯವಸ್ಥೆ ಮಾಡಬೇಕೆಂದು ನಾವು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದ್ದೇವೆ. ಪೀಠದಿಂದಲೂ ಕೂಡ ವಿಭಿನ್ನ ಸ್ಥಳಗಳಲ್ಲಿ ವೈದ್ಯರ ತಂಡವನ್ನು ನಿಯೋಜಿಸಿ ಭಕ್ತರ ಆರೋಗ್ಯವನ್ನು ಕಾಪಾಡುವ ಕಾರ್ಯ ಮಾಡಲಾಗಿದೆ ಜೊತೆಗೆ ಅಲ್ಲಲ್ಲಿ ನೀರಿನ ಹಾಗೂ ಔಷಧಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
VIDEO: ‘ಕರೊನಾ ಭಜನೆ’ ನೀವು ಕೇಳಿದ್ದೀರಾ? ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಅದ್ಭುತ ಮ್ಯೂಸಿಕ್​ನೊಂದಿಗಿನ ಈ ಹಾಡು ಕಾಮಿಡಿನಾ? ನಾನ್​ಸೆನ್ಸಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
