ಬೆಂಗಳೂರು: ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣ ಮೂಲದ ಟೆಕ್ಕಿಯೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೆ ರಾಜ್ಯದಲ್ಲಿ ಆತಂಕದ ವಾತಾವರಣ ನಿರ್ವಣವಾಗಿದ್ದು, ನೆಗಡಿ, ಕೆಮ್ಮು ಕಾಣಿಸಿಕೊಂಡವರೂ ಭೀತಿಯಿಂದ ಆಸ್ಪತ್ರೆಗಳತ್ತ ದೌಡಾಯಿಸುತ್ತಿದ್ದಾರೆ.
ಶೀತ ಸಂಬಂಧಿ ಸಮಸ್ಯೆ ಉಳ್ಳವರು ಹಾಗೂ ನಾನಾ ಭಾಗಗಳಿಗೆ ಪ್ರಯಾಣ ಹೋಗಿ ಬಂದವರು ನಗರದ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್​ಐ) ಸೇರಿ ನಾನಾ ಆಸ್ಪತ್ರೆಗಳಿಗೆ ತೆರಳಿ ಸ್ವಯಂ ಆರೋಗ್ಯ ತಪಾಸಣೆಗೆ ಒಳಗಾಗುತ್ತಿದ್ದಾರೆ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಮಂಗಳವಾರ ಒಂದೇ ದಿನ 95 ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದು 5 ಮಂದಿಯ ಸ್ವಾ್ಯಬ್ (ಗಂಟಲಿನ ದ್ರವ) ಮತ್ತು ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಬುಧವಾರ 63 ಮಂದಿ ತಪಾಸಣೆಗೆ ಒಳಗಾಗಿದ್ದು, 13 ಮಂದಿಯ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಡಾ. ನಾಗರಾಜ್ ತಿಳಿಸಿದ್ದಾರೆ. ಬಿಎಂಸಿಆರ್​ಐನಲ್ಲಿ ಎರಡು ದಿನಗಳಲ್ಲಿ 30ಕ್ಕೂ ಹೆಚ್ಚು ಮಂದಿ ತಪಾಸಣೆಗೆ ಒಳಪಟ್ಟಿದ್ದು, ಯಾರಲ್ಲೂ ಸೋಂಕು ದೃಢಪಟ್ಟಿಲ್ಲ ಎಂದು ಸಂಸ್ಥೆಯ ಡೀನ್ ಮತ್ತು ನಿರ್ದೇಶಕಿ ಡಾ. ಜಯಂತಿ ಹೇಳಿದ್ದಾರೆ.
ಐವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ: ರಾಜೀವ್​ಗಾಂಧಿ ಆಸ್ಪತ್ರೆಯಲ್ಲಿ ಐವರು ದಾಖಲಾಗಿದ್ದು, ಇವರಲ್ಲಿ ಇಬ್ಬರ ಪರೀಕ್ಷಾ ವರದಿ ಬಂದಿದ್ದು, ಸೋಂಕು ದೃಢಪಟ್ಟಿಲ್ಲ. ಮೂವರ ವರದಿಗಾಗಿ ಕಾಯಲಾಗುತ್ತಿದೆ. ಕಳೆದ ಫೆ. 27ರಂದು ಇರಾನಿನಿಂದ ಆಗಮಿಸಿದ್ದ ದಂತ ವೈದ್ಯ ವಿದ್ಯಾರ್ಥಿಯ ತಾಯಿ ಇರಾನಿನಲ್ಲಿದ್ದು, ಕರೊನಾ ಸೋಂಕಿಗೆ ಒಳಗಾಗಿದ್ದಾರೆ. ವಿಷಯ ತಿಳಿದ ವಿದ್ಯಾರ್ಥಿ ಆಸ್ಪತ್ರೆಗೆ ಆಗಮಿಸಿ ತಪಾಸಣೆಗೆ ಒಳಗಾಗಿದ್ದು, ವರದಿಯಲ್ಲಿ ಸೋಂಕು ದೃಢಪಟ್ಟಿಲ್ಲ. ಆದರೆ ಅವರ ಬಿಡುಗಡೆಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಾಗಿ ಕಾಯಲಾಗುತ್ತಿದೆ. ಉಳಿದ ನಾಲ್ವರಲ್ಲಿ ಒಬ್ಬರು ಸೋಂಕಿತ ಟೆಕ್ಕಿಯ ಕೊಠಡಿಯಲ್ಲಿದ್ದವರು, ಮತ್ತೊಬ್ಬರು ಟೆಕ್ಕಿಯ ಸಹೋದ್ಯೋಗಿ. ಇನ್ನಿಬ್ಬರು ಮಂಗಳವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಂದಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆ ನಿರ್ದೇಶಕ ಡಾ. ನಾಗರಾಜ್ ತಿಳಿಸಿದ್ದಾರೆ.
42 ಪ್ರಯಾಣಿಕರ ತಪಾಸಣೆ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜ.20 ರಿಂದ ಮಾ. 4ರವರೆಗೆ 42,283 ಪ್ರಯಾಣಿಕರನ್ನು ಥರ್ಮಲ್ ಸ್ಕಾ್ಯನರ್ ತಪಾಸಣೆಗೆ ಒಳಪಡಿಲಾಗಿದ್ದು, ಯಾರಲ್ಲೂ ಸೋಂಕು ದೃಢಪಟ್ಟಿಲ್ಲ.
ಮಾಸ್ಕ್ ಹೆಚ್ಚಿದ ಬೇಡಿಕೆ: ಕೊರೊನಾರೊನಾ ಹಾಗೂ ಎಚ್1ಎನ್1 ಭೀತಿ ಹಿನ್ನೆಲೆಯಲ್ಲಿ ಸೋಂಕಿನಿಂದ ರಕ್ಷಣೆ ಪಡೆಯಲು ಬೆಂಗಳೂರು ಸೇರಿ ನಗರ ಪ್ರದೇಶಗಳಲ್ಲಿ ಜನರು ಮಾಸ್ಕ್​ಗೆ ಮುಗಿಬೀಳುತ್ತಿದ್ದಾರೆ. ಬೇಡಿಕೆ ಹೆಚ್ಚಿದ ಹಿನ್ನಲೆಯಲ್ಲಿ ಮಾಸ್ಕ್ ಪೂರೈಕೆಯಲ್ಲಿ ಕೊರತೆ ಉಂಟಾಗಿದ್ದು, ದರ ಹೆಚ್ಚಿದೆ. ಮಾಸ್ಕ್ ತಯಾರಿಸಲು ಅಗತ್ಯವಾದ ಕಚ್ಚಾ ಉತ್ಪನ್ನಗಳನ್ನು ಚೀನಾ ಮತ್ತಿತರ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು. ಇದೀಗ ಕರೊನಾದಿಂದಾಗಿ ಆಮದು ಮತ್ತು ರಫ್ತು ಬಹುತೇಕ ಸ್ಥಗಿತಗೊಂಡಿರುವುದರಿಂದ ಮಾಸ್ಕ್ ಪೂರೈಕೆಯಲ್ಲಿ ಸಮಸ್ಯೆಯಾಗಿದ್ದು, ಬೇಡಿಕೆಯೊಂದಿಗೆ ದರವೂ ಹೆಚ್ಚಿದೆ.
ಕೇರಳಕ್ಕೆ ಕೇಂದ್ರ ಸರ್ಕಾರದ ಪ್ರಶಂಸೆ
ಕಾಸರಗೋಡು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಅತೀವ ಎಚ್ಚರಿಕೆ ವಹಿಸುತ್ತಿದ್ದು, ದಿನದ 24 ತಾಸು ತೀವ್ರ ನಿಗಾ ಇರಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೇರಳ ರಾಜ್ಯ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದರು. ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಕರೊನಾ ಪಾಸಿಟಿವ್ ಕಂಡುಬಂದಿದ್ದ 3 ಮಂದಿಯನ್ನು ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಎಲ್ಲ ರಾಜ್ಯಗಳ ಆರೋಗ್ಯ ಇಲಾಖೆ
ಅಧಿಕಾರಿಗಳೊಂದಿಗೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೀವ್ ಗೌಬಾ ನಡೆಸಿರುವ ವಿಡಿಯೋ ಕಾನ್ಪರೆನ್ಸ್​ನಲ್ಲಿ ಕರೊನಾ ವಿರುದ್ಧ ಕೇರಳ ಸರ್ಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಕೇರಳಕ್ಕೆ ವಿದೇಶಗಳಿಂದ ಬರುವವರ ಸಂಖ್ಯೆ ಹೆಚ್ಚಿದೆ. ಅವರ ಮೇಲೆ ನಿಗಾ ಇರಿಸಲಾಗಿದೆ ಎಂದು ಶೈಲಜಾ ವಿವರಿಸಿದರು.
ಕರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ಪೂರೈಕೆಯಲ್ಲಿ ಯಾವುದೇ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಆರು ತಿಂಗಳಿಗೆ ಬೇಕಾಗುವಷ್ಟು ಮಾಸ್ಕ್ ಗಳಿಗೆ ಈಗಾಗಲೇ ಬೇಡಿಕೆ ಪಟ್ಟಿ ಸಲ್ಲಿಸಲಾಗಿದೆ. ತಪಾಸಣೆ ಹಾಗೂ ಚಿಕಿತ್ಸೆಗೆ ಆಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಯಾರೂ ಆತಂಕ ಪಡಬೇಕಿಲ್ಲ.
| ಡಾ. ಕೆ. ಸುಧಾಕರ್ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
