ಬೆಂಗಳೂರು:ಕಳೆದ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆಯ ಬೆಳವಣಿಗೆ ನಿಗಮ, ಮಂಡಳಿ ನೇಮಕ ಪ್ರಕ್ರಿಯೆ ಸಂದರ್ಭದಲ್ಲಿ ಪರಿಣಾಮ ಬೀರಿರುವ ಪ್ರಸಂಗ ನಡೆದಿದೆ.
ಲಭ್ಯ ಇರುವ ನಿಗಮ, ಮಂಡಳಿಗಳಲ್ಲಿ ಶಾಸಕರಿಗೆ, ಕಾರ್ಯಕರ್ತರಿಗೆ ಸಮಾನ ಅವಕಾಶ ಸಿಗಬೇಕೆಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಪೈಪೋಟಿ ನಡೆಸಿದ್ದು ಒಂದು ಹಂತವಾದರೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ತಮ್ಮ ಕೋಟಾದಡಿ ನಿಗಮ, ಮಂಡಳಿಯಲ್ಲಿ ಅವಕಾಶ ಕೊಡಿಸಲು ಕೆಲವು ಹೆಸರನ್ನು ತಂದಿದ್ದಾರೆ. ಜತೆಗೆ ಎಐಸಿಸಿ ಅಧ್ಯಕ್ಷರ ಹೆಸರು ಬಳಸಿಕೊಂಡು ಕೆಲವು ಹೆಸರು ಪಟ್ಟಿಯಲ್ಲಿ ಸೇರಿಕೊಂಡಿದೆ. ಇದು ಸಿಎಂ ಹಾಗೂ ಡಿಸಿಎಂ ಅಸಹನೆಗೆ ಕಾರಣವಾಗಿದೆ.
ಮಹತ್ವದ ಬೆಳವಣಿಗೆಯಲ್ಲಿ ಸಿಎಂ, ಡಿಸಿಎಂ ಇಬ್ಬರೂ ಒಟ್ಟಿಗೆ ಚರ್ಚೆ ನಡೆಸಿ, ‘ಅನ್ಯ’ ಹೆಸರಿರುವ ಪಟ್ಟಿಯನ್ನು ಯಾವುದೇ ಕಾರಣಕ್ಕೂ ಒಪ್ಪಬಾರದೆಂದು ಜಂಟಿ ನಿರ್ಧಾರ ಮಾಡಿದ್ದಾರೆಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ವಿಧಾನಸಭೆ ಚುನಾವಣೆ ವೇಳೆ ಸುರ್ಜೆವಾಲಾ ಅವರು ಟಿಕೆಟ್ ಆಶ್ವಾಸನೆ ನೀಡಿದ್ದ ಕೆಲವರಿಗೆ ಅವಕಾಶ ಕೊಡಿಸುವಲ್ಲಿ ಸಫಲರಾಗಿರಲಿಲ್ಲ. ಇದೀಗ ಅಂತಹ ಕೆಲವರಿಗೆ ಈಗ ಅವಕಾಶ ನೀಡುವ ಪ್ರಯತ್ನ ನಡೆದಿದೆ. ಇದನ್ನು ಒಪ್ಪಲು ಸಾಧ್ಯವೇ ಇಲ್ಲ ಎಂಬುದು ಸಿಎಂ ಆಪ್ತ ಮೂಲಗಳ ವಿವರಣೆಯಾಗಿದೆ.ಇನ್ನೊಂದು ಸಂಗತಿ ಎಂದರೆ ಕಲಬುರಗಿ ಭಾಗದ ನಾಲ್ಕು ಜನರ ಹೆಸರು ದೆಹಲಿಯಿಂದ ಬಂದ ಪಟ್ಟಿಯಲ್ಲಿ ಇದೆ. ಈ ಹೆಸರನ್ನು ಮಲ್ಲಿಕಾರ್ಜುನ ಖರ್ಗೆಯವರು ಪ್ರಸ್ತಾಪಿಸಿರುವ ಸಾಧ್ಯತೆ ಕಡಿಮೆ ಎಂಬುದು ಸಿಎಂ, ಡಿಸಿಎಂ ವಾದ. ಹೀಗಾಗಿ ಪಟ್ಟಿಯನ್ನು ನಾವು ಅಂತಿಮಗೊಳಿಸುತ್ತೇವೆ, ಇಲ್ಲವಾದರೆ ಒಪು್ಪವುದು ಬೇಡ ಎಂದು ತೀರ್ವನಕ್ಕೆ ಬಂದಿದ್ದಾರೆನ್ನಲಾಗಿದೆ.
ಇಂದು ಕಾಂಗ್ರೆಸ್ ಪ್ರತಿಭಟನೆ:ಅಸ್ಸಾಂನಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಯವರಿಗೆ ಬಿಜೆಪಿಯವರಿಂದ ಅಡ್ಡಿಪಡಿಸುವ ಕೆಲಸ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಮಂಗಳವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆಕೊಟ್ಟಿದೆ. ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಮೇಲೆ ದಾಳಿ ಮಾಡಲೆತ್ನಿಸಿದ್ದರು, ಅವರು ಸಾಗುತ್ತಿದ್ದ ಬಸ್ಸನ್ನು ಅಡ್ಡಗಟ್ಟಿದರು. ಹೀಗಾಗಿ ಜ.23ರಂದು ಬೆಳಗ್ಗೆ 10.30ಕೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಕೈಗೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಪಕ್ಷದ ಜಿಲ್ಲಾ ಘಟಕಗಳಿಗೆ ಸೂಚನೆ ಕಳಿಸಿದ್ದಾರೆ. ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಪದಾಧಿಕಾರಿಗಳು, ವಿವಿಧ ಕೋಶಗಳ ಮುಖ್ಯಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 3 =
Remember me
