ಬೆಂಗಳೂರುಕಿಯೋನಿಕ್ಸ್, ಎಂಎಸ್‌ಐಎಲ್ ಸೇರಿ ಆರು ನಿಗಮ- ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,17,961 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (41 ಹುದ್ದೆ), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 725 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.
ಈ ತಾತ್ಕಾಲಿಕ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ 29ರೊಳಗೆ ಇ-ಮೇಲ್ (kea2023examgmail.com) ಮೂಲಕ ಸಲ್ಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 4 =
Remember me
