ಬೆಂಗಳೂರುಒಂದೇ ಅವಧಿಯಲ್ಲಿ ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಅಥವಾ ಪ್ರತ್ಯೇಕ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಪ್ರವೇಶ ಪತ್ರ ಡೌನ್‌ಲೋಡ್ ಆಗಿದ್ದರೆ, ಯಾವುದಾದರು ಒಂದು ಪರೀಕ್ಷೆ ಬರೆದು ಎರಡೂ ಪ್ರವೇಶ ಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಸ್ಪಷ್ಟಪಡಿಸಿದ್ದಾರೆ.
ವಿವಿಧ 5 ನಿಗಮ- ಮಂಡಳಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವಾಗ ಅನೇಕ ಮಂದಿ ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿರುವ ಕಾರಣ ಅವರಿಗೆ ಪ್ರತ್ಯೇಕ ಸ್ಥಳಗಳಲ್ಲಿ ಪರೀಕ್ಷಾ ಕೇಂದ್ರ ಹಂಚಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಅಭ್ಯರ್ಥಿಗಳು ತಮ್ಮ ಒಂದೊಂದು ಅರ್ಜಿಯಲ್ಲೂ ಒಂದೊಂದು ರೀತಿ ಹೆಸರುಗಳನ್ನು ಬರೆದಿದ್ದಾರೆ. ಹಾಗೆಯೇ ಪ್ರತ್ಯೇಕ ಪರೀಕ್ಷಾ ಕೇಂದ್ರಗಳನ್ನು ಉಲ್ಲೇಖಿಸಿರುವುದು ಇಷ್ಟೆಲ್ಲ ಗೊಂದಲಗಳಿಗೆ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.
ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳು ಡೌನ್‌ಲೋಡ್ ಆಗಿವೆ. ಕೆಲವರಿಗೆ ಅ.28 ಮತ್ತು 29 ಈ ಎರಡೂ ದಿನಾಂಕಗಳಂದು ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿದ್ದು, ಅಂತಹವರು ಎರಡೂ ಕಡೆ ಪರೀಕ್ಷೆ ಬರೆಯಬೇಕು. ಆದರೆ, ಒಂದೇ ಅವಧಿಯಲ್ಲಿ ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಅಥವಾ ಪ್ರತ್ಯೇಕ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಪ್ರವೇಶ ಪತ್ರ ಡೌನ್‌ಲೋಡ್ ಆಗಿದ್ದರೆ, ಯಾವುದಾದರು ಒಂದು ಪರೀಕ್ಷೆ ಬರೆದು ಎರಡೂ ಪ್ರವೇಶ ಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + five =
Remember me
