ಬೆಂಗಳೂರು:ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತ, ಕನ್ನಡಪರ ಮತ್ತು ಸಂಘ ಸಂಸ್ಥೆಗಳು ನಡೆಸುತ್ತಿರುವ ಪ್ರತಿಭಟನೆಗೆ ರಾಜ್ಯ ಸರ್ಕಾರಿ ಪಡಿತರ ವಿತರಕ ಸಂಘ ಹಾಗೂ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಬೆಂಬಲ ಸೂಚಿಸಿವೆ.
15 ದಿನಗಳ ಕಾಲ ಪ್ರತಿ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ಕೋರ್ಟ್ ನೀಡಿರುವ ತೀರ್ಪು ರಾಜ್ಯಕ್ಕೆ ಮಾರಕವಾಗಿದೆ. ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಬೆಂಗಳೂರಿನಲ್ಲಿ ವಾಸಿಸುತ್ತಿರುವ 1.3 ಕೋಟಿ ಜನರು ಸೇರಿ ಮಂಡ್ಯ, ಮೈಸೂರು, ರಾಮನಗರ ಸೇರಿ ಇತರ ಜಿಲ್ಲೆಗಳ ಲಕ್ಷಾಂತರ ರೈತರು ಕುಡಿಯಲು ಮತ್ತು ಬೆಳೆ ಬೆಳೆಯಲು ಕಾವೇರಿ ನೀರನ್ನು ಅವಲಂಬಿಸಿದ್ದಾರೆ. ಪ್ರಸ್ತಕ ವರ್ಷದಲ್ಲಿ ಮಳೆ ಕೊರತೆಯಿಂದ ನೀರಿನ ಅಭಾವ ಉಂಟಾಗಿದೆ. ಹೀಗಿರುವಾಗ, ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಸರಿಯಲ್ಲ ಎಂದು ಸಂಘದ ಅಧ್ಯಕ್ಷ ಎ.ಅಮೃತ್‌ರಾಜ್ ಹೇಳಿದ್ದಾರೆ.
ಹಿಂದೆಯೂ ನಾಡು-ನುಡಿ-ಜಲಕ್ಕೆ ಸಂಕಷ್ಟ ಎದುರಾದಗ ನಮ್ಮ ಸಂಘ ಬೆಂಬಲ ಸೂಚಿಸಿತ್ತು. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹಂಚಿಕೆ ಮಾಡುವ ವಿಷಯದಲ್ಲೂ ನಡೆಯುತ್ತಿರುವ ಹೋರಾಟಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ, ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಬೆಂಬಲ ಇರುತ್ತದೆ ಎಂದರು.
ಇದನ್ನೂ ಓದಿ:ಆಸಕ್ತರಿಂದ ಲಾಂಛನಗಳ ಮಾದರಿ ಆಹ್ವಾನ
ರಾಜ್ಯ ಸರ್ಕಾರಿ ಪಡಿತರ ವಿತರಕ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಮಾತನಾಡಿ, ಹಳೆಯ ಮೈಸೂರು ಭಾಗದ ರೈತರ ಜೀವನಾಡಿಯಾಗಿರುವ ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿರುವುದು ಸರಿಯಲ್ಲ. ಮುಂದಿನ ಮುರ‌್ನಾಲ್ಕ ತಿಂಗಳು ಕಳೆದರೆ ಕುಡಿಯುವ ನೀರು ಇಲ್ಲದಂತಾಗಲಿದೆ. ತಮಿಳುನಾಡಿಗೆ ಹರಿಯುತ್ತಿರುವ ನೀರನ್ನು ಕೂಡಲೆ ಸ್ಥಗಿತಗೊಳಿಸಬೇಕು. ರಾಜ್ಯದಲ್ಲಿ ನಡೆಯುತ್ತಿರುವ ರೈತ, ಕನ್ನಡಪರ ಹಾಗೂ ಸಂಘ ಸಂಸ್ಥೆಗಳೊಂದಿಗೆ ನಮ್ಮ ಸಂಘದ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ. ಮಂಡ್ಯ, ಮೈಸೂರು ಸೇರಿ ರಾಜ್ಯದ ಭಾಗಗಳಲ್ಲಿ ಸಂಘದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 11 =
Remember me
