ಚಿಕ್ಕಮಗಳೂರು:ಭ್ರಷ್ಟಾಚಾರ ಆರೋಪದಲ್ಲಿ ತಹಸೀಲ್ದಾರ್ ಎಸಿಬಿ ಬಲೆಗೆ ಸಿಕ್ಕಿಹಾಕಿಕೊಂಡು ಜೈಲುಪಾಲಾಗಿದ್ದರೆ, ಮತ್ತೊಂದೆಡೆ ಅವರ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಹಸೀಲ್ದಾರ್ ಅವರ ಚಾಲಕ ವಿಜೇತ್​ (26) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹೆಗ್ತೂರು ಗ್ರಾಮದ ನಿವಾಸಿಯಾಗಿದ್ದ ವಿಜೇತ್​ ಮನೆಯ ಸಮೀಪದ ಅಡಿಕೆ ತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಶೃಂಗೇರಿ ತಹಸೀಲ್ದಾರ್​ ಅಂಬುಜಾ ಅವರ ಕಾರು ಚಾಲಕನಾಗಿದ್ದ.
ತಹಸೀಲ್ದಾರ್ ಅಂಬುಜಾ ಜ.6ರಂದು ಎಸಿಬಿ ಬಲೆಗೆ ಬಿದ್ದಿದ್ದರು. ಇವರು ಬೋಗಸ್ ಹಕ್ಕುಪತ್ರ ನೀಡಿ ವಂಚಿಸಿದ್ದ ಆರೋಪದ ಮೇಲೆ ಜೈಲುಪಾಲಾಗಿದ್ದಾರೆ. ಅಂಬುಜಾ ಪ್ರಕರಣ ಹಿನ್ನೆಲೆಯಲ್ಲಿ ಇನ್ನಿತರ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈ ಮಧ್ಯೆ ಆಕೆಯ ಚಾಲಕ ವಿಜೇತ್ ಆತ್ಮಹತ್ಯೆ ಪ್ರಕರಣ ನಡೆದಿದೆ.
ವಿಜಯವಾಣಿ ವಿಜಯೋತ್ಸವ ವಿಜೇತರಿಗೆ ಬಹುಮಾನಗಳ ವಿತರಣೆ: ಕಾರು, ಬೈಕ್, ಫ್ರಿಜ್​ ಸೇರಿ ಹಲವು ಉಡುಗೊರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 18 =
Remember me
