ಕೋಲಾರ:ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್​ಟಿಒ) ಕಚೇರಿಯಲ್ಲಿನ ಭ್ರಷ್ಟಾಚಾರವನ್ನು ಪ್ರಶ್ನಿಸಿದ್ದಕ್ಕೆ ದಲ್ಲಾಳಿಗಳು ಹಲ್ಲೆ ಮಾಡಿದ ಪ್ರಸಂಗವೊಂದು ನಡೆದಿದೆ. ಈ ಮೂಲಕ ಕೆಆರ್​ಎಸ್​ ಪಕ್ಷದ ಕಾರ್ಯಕರ್ತರ ಮೇಲೆ ಮತ್ತೊಂದು ಹಲ್ಲೆ ನಡೆದಂತಾಗಿದೆ.
ಕೋಲಾರದ ಆರ್​ಟಿಒ ಕಚೇರಿಯಲ್ಲಿ ಇಂದು ಈ ಹಲ್ಲೆ ಪ್ರಕರಣ ನಡೆದಿದೆ. ಭ್ರಷ್ಟಾಚಾರ ಪ್ರಶ್ನಿಸಿದ ಕೆಆರ್​ಎಸ್​ ಪಕ್ಷದ ಕಾರ್ಯಕರ್ತರ ಮೇಲೆ ಅಲ್ಲಿದ್ದ ಡ್ರೈವಿಂಗ್ ಸ್ಕೂಲ್ ದಲ್ಲಾಳಿಗಳು ಹಲ್ಲೆ ಮಾಡಿದ್ದಾರೆ. ಕೆಆರ್​ಎಸ್​ ಪಕ್ಷದ ಮುಳಬಾಗಿಲು ಯುವಘಟಕ ಅಧ್ಯಕ್ಷ ಗಣೇಶ್​, ಆನಂದ್, ಮಹೇಶ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಮಾತ್ರವಲ್ಲದೆ ಜಿಲ್ಲಾಧ್ಯಕ್ಷೆ ಇಂದಿರಾ ರೆಡ್ಡಿ ಮೇಲೂ ಹಲ್ಲೆಗೆ ಮುಂದಾಗಿದ್ದರು.
ಇದನ್ನೂ ಓದಿ:ಜೆರಾಕ್ಸ್ ಅಂಗಡಿಯಲ್ಲೇ ತಯಾರಾಗ್ತಿತ್ತು ನಕಲಿ ವೋಟರ್ ಕಾರ್ಡ್; ಚುನಾವಣಾ ಆಯೋಗದ ವೆಬ್​ಸೈಟ್​ ದುರ್ಬಳಕೆ
ಆರ್​ಟಿಒ ಕಚೇರಿಯಲ್ಲಿ ನಡೆಯುತ್ತಿದ್ದ ಅನ್ಯಾಯದ ವಿರುದ್ದ ಪ್ರಶ್ನೆ ಮಾಡಿದ್ದಲ್ಲದೆ, ಅದನ್ನು ವಿಡಿಯೋ ಮಾಡಿದ್ದಕ್ಕೆ ಸಿಟ್ಟಾದ ದಲ್ಲಾಳಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ.
ಇತ್ತೀಚೆಗೆ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಕಾನೂನುಬಾಹಿರವಾಗಿ ಸಚಿವ ವಿ.ಸೋಮಣ್ಣ ಅವರ ಬೃಹತ್ ಫ್ಲೆಕ್ಸ್ ಹಾಕಿದ್ದನ್ನು ಪ್ರಶ್ನಿಸಿದ್ದಾಗಲೂ ಸೋಮಣ್ಣ ಬೆಂಬಲಿಗರು ಕೆಆರ್​ಎಸ್ ಪಕ್ಷದವರ ಮೇಲೆ ಹಲ್ಲೆ ನಡೆಸಿದ್ದರು.
ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದ ಅಕ್ಕ ಹೃದಯಾಘಾತದಿಂದ ಸಾವು!
ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 7 =
Remember me
