ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ತಡೆ ಕೋರಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಡಿಕೆಶಿ  ಅವರಿಗೆ ನೋಟಿಸಿ ಜಾರಿ ಮಾಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ತರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್​ ಮಧ್ಯಂತರ ತಡೆ ನೀಡಿತ್ತು. ಇದನ್ನು ತೆರವು ಕೋರಿ ಸಿಬಿಐ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಂದು(ಅಕ್ಟೋಬರ್ 16) ಸಿಬಿಐನ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ನೇತೃತ್ವದ ದ್ವಿಸದಸ್ಯ ಪೀಠ, ಈ ಬಗ್ಗೆ ಅಭಿಪ್ರಾಯ ಕೇಳಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 7 ಕ್ಕೆ ಮುಂದೂಡಿದೆ.
ಪ್ರಕರಣ:ಡಿಕೆ ಶಿವಕುಮಾರ್ ಅವರು 2023ರಿಂದ 2018ರಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ವಿವಿಧ ಕಲಂಗಳ ಅಡಿಯಲ್ಲಿ 2020ರ ಅಕ್ಟೋಬರ್ 3ರಂದು ಪ್ರಕರಣ ದಾಖಲಿಸಿತ್ತು.
ಈ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಮೇಲಿಂದ ಮೇಲೆ ತಡೆಯಾಜ್ಞೆಯನ್ನು ಕೋರ್ಟ್ ವಿಸ್ತರಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಇದೀಗ ಹೈಕೋರ್ಟ್​ನ ಆದೇಶವನ್ನು ತೆರವು ಕೋರಿ ಸುಪ್ರೀಂಕೋರ್ಟ್​ ಮೊರೆ ಹೋಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − ten =
Remember me
