ಬಸವಕಲ್ಯಾಣ:ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ನಿಂದ ರಾಜ್ಯದ ಜನತೆ ಬೇಸರಗೊಂಡಿದ್ದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬಗ್ಗೆ ಒಲವು ಹೊಂದಿದ್ದಾರೆ. ಹೀಗಾಗಿ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಗೆಲ್ಲಿಸಲಿದ್ದಾರೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ ಹೇಳಿದರು.
ತಾಲೂಕಿನ ಗೌರ, ಗುತ್ತಿ, ಕೋಟಮಾಳ, ಪರತಾಪುರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಅವರ ಪರ ಪ್ರಚಾರ ನಡೆಸಿ ಮಾತನಾಡಿ, ಭ್ರಷ್ಟಾಚಾರದಲ್ಲಿ ಮುಳುಗಿರುವುದೇ ಬಿಜೆಪಿಗೆ ಮುಳುವಾಗಲಿದೆ. ಈ ಸರ್ಕಾರದ ಆಡಳಿತ ವ್ಯವಸ್ಥೆಯಿಂದ ಜನ ಬೇಸರಗೊಂಡಿದ್ದಾರೆ.
ಅಧಿಕೃತ ಪ್ರತಿಪಕ್ಷದ ಸ್ಥಾನದಲ್ಲಿರುವ ಕಾಂಗ್ರೆಸ್ ಸಹ ಸರ್ಕಾರದ ವೈಫಲ್ಯ ಹಾಗೂ ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಿತ ಕಾಪಾಡುವಲ್ಲಿ ವಿಫಲವಾಗಿವೆ ಎಂದು ದೂರಿದರು. ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಮಾತನಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + fifteen =
Remember me
