ಬೆಂಗಳೂರು:ಕಾಂಗ್ರೆಸ್ ವಿಧಾನಸಭಾ ಚುನಾವಣೆಗೂ ಮುನ್ನ ಐದು ಗ್ಯಾರಂಟಿಗಳನ್ನು ಘೋಷಿಸಿ ಮತಗಳನ್ನು ಸೆಳೆದು ಭರ್ಜರಿ ಬಹುಮತದೊಂದಿಗೆ ಗೆಲುವನ್ನು ಪಡೆದು ಅಧಿಕಾರವನ್ನೂ ಗಳಿಸಿದೆ. ಆದರೆ ಆ ಗ್ಯಾರಂಟಿಗಳ ಪೈಕಿ ಒಂದಾಗಿರುವ ಶಕ್ತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆಯೇ ಎಂಬ ಅನುಮಾನ ಇದೀಗ ಮೂಡುವಂತಾಗಿದೆ.
ಕಾಂಗ್ರೆಸ್ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಹಾಗೂ ಅನ್ನಭಾಗ್ಯ ಎನ್ನುವ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಜಾರಿಗೂ ತಂದಿದೆ. ಆ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡುವ ಶಕ್ತಿ ಯೋಜನೆ ಭಾರಿ ಜನಪ್ರಿಯತೆ ಗಳಿಸಿದ್ದಲ್ಲದೆ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು.
ಈ ಯೋಜನೆ ಜಾರಿಯಾಗಿ ಸೆ. 21ಕ್ಕೆ ನೂರು ದಿನಗಳನ್ನು ಪೂರೈಸಿದೆ. ಈ ವರೆಗೆ ಒಟ್ಟು 64 ಕೋಟಿ ಮಹಿಳೆಯರು (ಪ್ರಯಾಣ ಸಂಖ್ಯೆ) ಉಚಿತ ಪ್ರಯಾಣ ಸೌಲಭ್ಯದ ಸದುಪಯೋಗ ಪಡೆದಿದ್ದು, ಇದಕ್ಕಾಗಿ ಸರ್ಕಾರ 1,472 ಕೋಟಿ ರೂ. ವೆಚ್ಚ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಳೆದ ತಿಂಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು.
ನಾಡಿನ ಎಲ್ಲಾ ಹೆಣ್ಣುಮಕ್ಕಳಿಗೆ ಶಕ್ತಿ ಯೋಜನೆಯಡಿ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿ, ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಇದರಿಂದ ಶಿಕ್ಷಣ, ಉದ್ಯೋಗ ಮುಂತಾದ ವಿಷಯಗಳಿಗೆ ಹೆಣ್ಣುಮಕ್ಕಳು ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ, ಸ್ವಾವಲಂಬಿಗಳಾಗಿ ನಿರ್ಣಯ ಕೈಗೊಳ್ಳಲು…pic.twitter.com/SyTJ9XSYvE
— CM of Karnataka (@CMofKarnataka)October 16, 2023

ಇದನ್ನೂ ಓದಿ:ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ಆದರೆ ಈ ಯೋಜನೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆಯೇ ಎಂಬ ಅನುಮಾನ ಈಗ ಮೂಡಿದೆ. ಅಲ್ಲದೆ ಅದಕ್ಕೆ ಪುಷ್ಟಿ ನೀಡುವಂತ ವಿಡಿಯೋವೊಂದು ಹರಿದಾಡುತ್ತಿದ್ದು, ಸರ್ಕಾರಿ ಯೋಜನೆಯೊಂದರಲ್ಲಿ ಮೋಸ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ನಲ್ಲಿ ಕಂಡಕ್ಟರ್ ಒಬ್ಬರು ಸುಮ್ಮನೆ ಟಿಕೆಟ್ ಹರಿದು ಬಿಸಾಕುತ್ತಿರುವುದು ಕಂಡುಬಂದಿದ್ದು, ಇದನ್ನು ಯುವತಿಯೊಬ್ಬರು ತಮ್ಮ ಮೊಬೈಲ್​​ಫೋನ್​ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!
ಮಾತ್ರವಲ್ಲ, ಟಿಕೆಟ್ ಹರಿದು ಎಸೆಯುತ್ತಿರುವುದೇಕೆ? ಎಂದು ಸಂಬಂಧಿತ ನಿರ್ವಾಹಕರನ್ನು ವಿಡಿಯೋ ಮಾಡುತ್ತಲೇ ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಗೆ ತಕ್ಷಣ ಉತ್ತರ ಕೊಡಲಾಗದೆ ಪೆಚ್ಚಾದ ನಿರ್ವಾಹಕ Sorry ಕೇಳಿದ್ದು, ಭ್ರಷ್ಟಾಚಾರದ ಅನುಮಾನವನ್ನು ಬಲವಾಗಿಸಿದೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆ ಕುರಿತ ಖಚಿತ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

ಆಧಾರ್ ಥರವೇ ಬರಲಿದೆ ಅಪಾರ್: ಒಂದು ದೇಶ ಒಂದು ಐಡಿ; ಇದು ಯಾರಿಗೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 7 =
Remember me
