ಬೆಂಗಳೂರು:ವಿದ್ಯಾವಂತರಿಂದಲೇ ಇಂದು ಭ್ರಷ್ಟಾಚಾರ ಹೆಚ್ಚಾಗುತ್ತಿದ್ದು, ಇದು ಅತ್ಯಂತ ಕಳವಳಕಾರಿ ಸಂಗತಿ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ತಂದೆ ಐಫೋನ್ ಕೊಡಿಸದಿದ್ದಕ್ಕೆ 18 ವರ್ಷದ ಮಗ ಆತ್ಮಹತ್ಯೆಗೆ ಶರಣು!
ನಗರದ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ “ವಿದ್ಯಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ – ವಿಎಸ್ಐಜಿ” ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಉದ್ಘಾಟಿಸಿ 10 ಮತ್ತು 12 ನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳು ವಿದ್ಯೆಯ ಜೊತೆ ವಿದ್ಯಾರ್ಥಿಗಳ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಬ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲು ಯುವ ಸಮೂಹ ಮುಂದಾಗಬೇಕು ಎಂದು ಕರೆ ನೀಡಿದರು.

ಎಲ್ಲಾ ರೋಗಗಳಿಗೂ ಮದ್ದಿದೆ. ಆದರೆ ದುರಾಸೆಗೆ ಮದ್ದಿಲ್ಲ. ಭ್ರಷ್ಟಾಚಾರಿಗಳಿಗೆ ಕಾನೂನಿನ ಹೆದರಿಕೆ ಇಲ್ಲದಿರುವುದೇ ಇದಕ್ಕೆ ಕಾರಣವಾಗಿದೆ. ನ್ಯಾಯಾಲಯದಲ್ಲಿ ಒಂದು ಪ್ರಕರಣ ಇತ್ಯರ್ಥವಾಗಲು 10 ರಿಂದ 15 ವರ್ಷಗಳು ಬೇಕಾಗುತ್ತದೆ. ಸಮಾಜದಲ್ಲಿ ಇದೀಗ ಬದಲಾಣೆ ತುರ್ತು ಅಗತ್ಯ ಎಂದರು.
ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಮಾತನಾಡಿ, ಶಿಕ್ಷಣ ಕ್ಷೇತ್ರ ಇಂದು ಅಗಾಧವಾಗಿ ಬೆಳವಣಿಗೆಯಾಗುತ್ತಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅನನ್ಯ ಎಂದು ಹೇಳಿದರು.
ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ. ಗೋವಿಂದರಾಜ್, ಸಾಲುಮರದ ತಿಮ್ಮಕ್ಕ, ಥಟ್ ಅಂತ ಹೇಳಿ ಖ್ಯಾತಿಯ ಡಾ. ನಾ. ಸೋಮೇಶ್ವರ ಮತ್ತಿತರ ಗಣ್ಯರನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮಂಜೇಗೌಡ ಗೌರವಿಸಿದರು. ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಪವನ್ ಮಂಜೇಗೌಡ ಮತ್ತಿತತರೆ ಗಣ್ಯರು ಉಪಸ್ಥಿತರಿದ್ದರು.
ಜಪಾನ್, ಕೊರಿಯಾ ಕಂಪನಿಗಳಿಂದ ರಾಜ್ಯದಲ್ಲಿ 6,450 ಕೋಟಿ ರೂ. ಹೂಡಿಕೆ: 1,000ಕ್ಕೂ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
