ಬೆಂಗಳೂರು:ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಮತ್ತು ಇತರೆ ಗಣ್ಯರು ತೀವ್ರ. ಸಂತಾಪ ವ್ಯಕ್ತಪಡಿಸಿದ್ದಾರೆ.
ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನ ಅತ್ಯಂತ ದುರದೃಷ್ಟಕರ ಹಾಗೂ ತೀವ್ರ ಆಘಾತ ತಂದಿದೆ. ವಿಧಾನ ಪರಿಷತ್ ಸದಸ್ಯರಾಗಿ, ಉಪ ಸಭಾಪತಿಯಾಗಿ ಅವರ ಕಾರ್ಯ ವೈಖರಿ ಅತ್ಯುತ್ತಮವಾಗಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಮರಿಸಿಕೊಂಡಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ಆಘಾತವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಚಿಕ್ಕಮಗಳೂರಿಗೆ ತೆರಳಲಿರುವ ಸಿಎಂ ಯಡಿಯೂರಪ್ಪ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಧರ್ಮೇಗೌಡರ ಅಂತಿಮ ದರ್ಶನ ಪಡೆದು, ಗೌರವ ಸಲ್ಲಿಸಲಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ಆಘಾತವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (2/2)
— CM of Karnataka (@CMofKarnataka)December 29, 2020

ವಿಧಾನಪರಿಷತ್ ಉಪಸಭಾಪತಿ ಹಾಗೂ@JanataDal_Sಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ.
— H D Devegowda (@H_D_Devegowda)December 29, 2020

ವಿಧಾನಪರಿಷತ್ ಉಪಸಭಾಪತಿ,@Janatadal_Sಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)December 29, 2020

ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು. 🙏
— Siddaramaiah (@siddaramaiah)December 29, 2020

ಜೆಡಿಎಸ್ ಮುಖಂಡರು ಹಾಗೂ ವಿಧಾನ ಪರಿಷತ್ ಉಪಸಭಾಪತಿಯವರಾಗಿದ್ದ ಶ್ರೀ ಎಸ್ ಎಲ್ ಧರ್ಮೇಗೌಡ ಅವರು ನಿಧನರಾದ ಸುದ್ದಿ ನಿಜಕ್ಕೂ ಧಿಗ್ಬ್ರಮೆ ಮೂಡಿಸಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ,ಅಭಿಮಾನಿ ವರ್ಗಕ್ಕೆ, ಸ್ನೇಹಿತರ ಬಳಗಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.#ಓಂಶಾಂತಿಃpic.twitter.com/JgOe47XcXC
— Basavaraj S Bommai (@BSBommai)December 29, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
