
ಬೆಂಗಳೂರು:ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಯುತ್ತಿದ್ದ ನೇಮಕಾತಿ ಪ್ರಕ್ರಿಯೆ ಕಡತವನ್ನು ಆರ್ಥಿಕ ಇಲಾಖೆಯ ಒಪ್ಪಿಗೆಗೆ ಕಳುಹಿಸಲಾಗಿದೆ.ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎನ್ನುವ ಉದ್ದೇಶದಿಂದ ಸಭಾಪತಿ ಬಸವರಾಜ ಹೊರಟ್ಟಿ ಅವರು ಮೊದಲ ಹಂತದಲ್ಲಿ 29 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಂಡಿದ್ದರು.ಈ ಹಿನ್ನೆಲೆಯಲ್ಲಿ ಹುದ್ದೆಗಳ ನೋಟಿಫಿಕೇಶನ್ ಹೊರಡಿಸಿದ್ದರು.ಗ್ಯಾರಂಟಿಗಳನ್ನು ಜಾರಿಗೆ ನೀಡಿರುವ ಸಂದರ್ಭದಲ್ಲಿ ಹುದ್ದೆಗಳ ಭರ್ತಿ ಮಾಡುವುದಕ್ಕೆ ಈ ಸಂದರ್ಭದಲ್ಲಿ ಆರ್ಥಿಕ ಹೊರೆ ಬೀಳಲಿದೆ ಎನ್ನುವುದು ಸರ್ಕಾರದ ವಾದವಾಗಿತ್ತು. ಈ ಹಿನ್ನೆಲೆಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ರ್ಸಾರ ಮೊದಲಿಗೆ ಹಸಿರು ನಿಶಾನೆ ತೋರಿಸಲಿಲ್ಲ.ಹುದ್ದೆಗಳ ಭರ್ತಿಗೆ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಆ ಕಡತವನ್ನು ಆರ್ಥಿಕ ಇಲಾಖೆಯ ಪೂರ್ವಾನುಮತಿ ಪಡೆದುಕೊಳ್ಳಲು ಕಳುಹಿಸಿಕೊಡಲಾಗಿದೆ.ತಾವು ಸಭಾಪತಿ ಆಗಿರುವ ಸಂದರ್ಭದಲ್ಲಿಯೇ ಬಾಕಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಮುಂದಾಗಿರುವ ಬಸವರಾಜ ಹೊರಟ್ಟಿ ಅವರು ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.ಸರ್ಕಾರಕ್ಕೆ ಆರ್ಥಿಕ ಹೊರೆಯಾದರೂ, ನೇಮಕ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎನ್ನುವುದು ವಿಧಾನ ಪರಿಷತ್ ಸಭಾಪತಿಗಳ ಒತ್ತಾಸೆಯಾಗಿದೆ. ಇದಕ್ಕೆ ಶೀಘ್ರವೇ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ ಎಂದು ಸಭಾಪತಿಗಳ ಕಚೇರಿಯ ಮೂಲಗಳು ತಿಳಿಸಿವೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 3 =
Remember me
