ಬೆಂಗಳೂರು:ವಿಧಾನ ಪರಿಷತ್ತಿನ ಐದು ಸ್ಥಾನಗಳ ದ್ವೈವಾರ್ಷಿಕ ಚುನಾವಣೆಗೆ ಹೊಸದಾಗಿ ಮತದಾರರ ಪಟ್ಟಿ ಸಿದ್ಧತೆಗೆ ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ಡಾ.ಬಿ.ಚಂದ್ರಶೇಖರ ಪಾಟೀಲ, ಎ. ದೇವೇಗೌಡ, ಎಸ್.ಎಲ್. ಭೋಜೇಗೌಡ, ಮರಿತಿಬ್ಬೇಗೌಡ,ವೈ.ಎ.ನಾರಾಯಣಸ್ವಾಮಿ ಪ್ರತಿನಿಧಿಸುತ್ತಿರುವ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹೊಸದಾಗಿ ಮತದಾರರ ಯಾದಿ ಸಿದ್ಧಪಡಿಸುವಂತೆ ಮುಖ್ಯ ಚುನಾವಣಾಧಿಕಾರಿಗೆ ಸೂಚನೆ ನೀಡಲಾಗಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಪುಟ್ಟಣ್ಣ ರಾಜಾಜಿನಗರ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸುವ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದೇ ರೀತಿ ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸುವ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.ಈ ಸ್ಥಾನಗಳು ಖಾಲಿ ಇವೆ. ಪುಟ್ಟಣ್ಣ ಅವರ ಅವಧಿ ನ.11,2026ಕ್ಕೆ ಹಾಗೂ ಆಯನೂರು ಮಂಜುನಾಥ್ ಅವಧಿ ಜೂ.21,2024ಕ್ಕೆ ಮುಕ್ತಾಯಗೊಳ್ಳಲಿದೆ.
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಅಥವಾ ಪರಿಷ್ಕರಣೆ ಮಾಡಲು ನವೆಂಬರ್ 1,2023 ಅರ್ಹತಾ ದಿನವಾಗಿದೆ.
ಅರ್ಜಿ ಸ್ವೀಕೃತಿಗೆ ಕೊನೆಯ ದಿನ: ನ.6,2023ಕರಡು ಮತದಾರರ ಪಟ್ಟಿ ಮುದ್ರಣ: ನ.20,2023ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ: ನ.23,2023 ರಿಂದ ಡಿ.9,2023ಆಕ್ಷೇಪಣೆ ವಿಲೇವಾರಿಗೆ ಕೊನೆಯ ದಿನ: ಡಿ.25,2023ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ: ಡಿ.30,2023——————–
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
