ಬೆಂಗಳೂರು:ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ವಿವಿಧ ರೀತಿಯ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಬರಲು ಸಜ್ಜಾಗಿವೆ. ಈ ನಡುವೆ ಬಿಬಿಎಂಪಿಯು ಈ ಕುರಿತು ಮಹತ್ವದ ಸಭೆಯನ್ನು ನಡೆಸಿ, ಹಲವಾರು ಸೂಚನೆಗಳನ್ನು ನೀಡಿದೆ.ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿರುವ ಬಿಬಿಎಂಪಿಯು, ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್ ಬ್ಯಾನರ್ ಮತ್ತು ಪ್ಲಾಸ್ಟಿಕ್ ಬಳಕೆ ಮಾಡಬಾರದೆಂದು ತಿಳಿಸಿದೆ. ಜತೆಗೆ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಮತ್ತಿತರ ಕಡೆಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸೂಕ್ತ ವ್ಯವಸ್ಥೆ ಮಾಡುವುದರೆ ಜತೆಗೆ ಸಣ್ಣ ವಿಗ್ರಹಗಳ ವಿಸರ್ಜನೆಗೆ ಪ್ರತಿ ವರ್ಷದಂತೆ ಮೊಬೈಲ್ ಟ್ಯಾಂಕ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಇದನ್ನೂ ಓದಿ:ಈ ಜ್ಯೂಸ್ ಕುಡಿದರೆ ದೇಹವು ಶುದ್ಧಿಯಾಗುತ್ತೆ, ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತೆ..!ಗಣೇಶ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಬೇಕು. ಮೆರವಣಿಗೆ ವೇಳೆ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ವಿಗ್ರಹ ವಿಸರ್ಜನೆ ಆಯ್ಕೆಯಾದ ಕೆರೆಗಳು ಮತ್ತು ಕೃತಕ ಕೊಳಗಳ ಸುತ್ತಲೂ ಸರಿಯಾದ ಬ್ಯಾರಿಕೇಡ್​ಗಳನ್ನು ಅಳವಡಿಸಿ ಜೀವರಕ್ಷಕ ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಿಸಬೇಕು ಎಂದು ತಿಳಿಸಿದೆ.ಅಗತ್ಯ ಇರುವ ಕಡೆಗಳಲ್ಲಿ ಸಿಸಿಟಿವಿ ಕ್ಯಾಮೆರಾ, ವಿದ್ಯುತ್ ದೀಪಗಳನ್ನೂ ಅಳವಡಿಸುವುದರ ಜತೆಗೆ ರಾಸಾಯನಿಕ ಬಣ್ಣಗಳನ್ನು ಬಳಸಿ ತಯಾರಿಸಿದ ಮತ್ತು ಥರ್ಮಾಕೋಲ್, ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಯಿಂದ ವಿಗ್ರಹವನ್ನು ತಯಾರಿಸುವುದನ್ನು ನಿಷೇಧ ಮಾಡಲಾಗಿದೆ. ಇದನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲು ಕ್ರಮವನ್ನು ಕೈಗೊಳ್ಳಬೇಕು. ಅಲ್ಲದೇ, ಬಿಎಂಪಿ, ಪೊಲೀಸ್, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 14 =
Remember me
