ಬೆಂಗಳೂರು:ಐಟಿ ರೈಡ್ ಸಂಬಂಧ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ವಾಗ್ದಾಳಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದರು, ನಕಲಿ ಸ್ವಾಮಿ, ಲೂಟಿ ರವಿ, ಮಾಜಿ ಸಿಎಂ, ಬ್ಲಾಕ್ ಮೇಲರ್ ಎಲ್ಲರಿಗೂ ಉತ್ತರ ನೀಡುತ್ತೇನೆ ಎಂದಿದ್ದಾರೆ.ಪಕ್ಷದ ಹೈಕಮಾಂಡ್ ನಾಯಕರು ಹಾಗೂ ಸಚಿವರಿಗೆ ಹಣ ಕಲೆಕ್ಷನ್ ಮಾಡುವ ಟಾಸ್ಕ್ ನೀಡಿದೆ ಎಂಬ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಈ ರೀತಿ ಉತ್ತರಿಸಿದರು.ನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ ಎಂದರು.ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ. ಅವರಿಗೆ ಐಟಿ ಇಲಾಖೆ ಪ್ರಕ್ರಿಯೆ ಗೊತ್ತಿಲ್ಲ. ಅವರು ಏಜೆಂಟರಂತೆ ಮಾತನಾಡುತ್ತಿದ್ದಾರೆ. ಅವರಂತೆ ನಾನು ಮಾತನಾಡುವುದಿಲ್ಲ. ನಾನು ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಅವರಂತೆ ಮಾತನಾಡಲು ಸಾಧ್ಯವಿಲ್ಲ. ನ್ಯಾಯಾಲಯದ ವಿಚಾರದಲ್ಲಿ ಆ ರೀತಿ ಮಾತನಾಡಿದರೆ ತಪ್ಪಾಗುತ್ತದೆ. ಅವರಿಗೆ ಉತ್ತರ ನೀಡಲು ಮುಹೂರ್ತ ಫಿಕ್ಸೃ್ ಮಾಡುತ್ತೇನೆ ಎಂದು ತಿಳಿಸಿದರು.ಪ್ರತಿಪಕ್ಷದವರ ಆರೋಪಕ್ಕೆ ಹೈವೋಲ್ಟೇಜೂ ಕೊಡ್ತಿನಿ, ಲೋವೋಲ್ಟೇಜೂ ಕೊಡ್ತಿನಿ, ನಕಲಿಗೂ ಕೊಡುವೆ, ಲೂಟಿಗೂ ಕೊಡುವೆ, ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದರು.ಬಿಜೆಪಿಯವರು ಪ್ರತಿಭಟನೆ ಮಾಡಬೇಕು, ಪ್ರತಿಭಟನೆ ಮಾಡಿದರೆ ಜನರಿಗೆ ಅವರ ಎಲ್ಲಾ ತರಹದ ಲೂಟಿ ಬಗ್ಗೆ ಗೊತ್ತಾಗುತ್ತದೆ, ಎಲ್ಲವನ್ನೂ ಬಿಚ್ಚಿಡುತ್ತೇವೆ ಎಂದೂ ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 − 2 =
Remember me
