ಬೆಂಗಳೂರು:ಇಡೀ ದೇಶದಲ್ಲಿಯೇ ಅತ್ಯಂತ ಬೃಹತ್​ ಕರೊನಾ ಕೇರ್​ ಸೆಂಟರ್​ ರಾಜ್ಯ ರಾಜಧಾನಿಯಲ್ಲಿ ನಿರ್ಮಾಣವಾಗಿದ್ದು, ಇನ್ನೊಂದು ವಾರದಲ್ಲಿ ಕಾರ್ಯಾರಂಭ ಮಾಡಲಿದೆ.
ತುಮಕೂರು ರಸ್ತೆಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ 10,100 ಹಾಸಿಗೆಗಳ ಸಾಮರ್ಥ್ಯದ ಕರೊನಾ ಕೇರ್​ ಸೆಂಟರ್​ ನಿರ್ಮಾಣವಾಗಿದೆ. ಒಟ್ಟು ಐದು ಹಾಲ್​ಗಳಲ್ಲಿ ಹಾಸಿಗೆಗಳ ವ್ಯವಸ್ಥೆಯಾಗಿದೆ. ಬೆಳಗ್ಗೆ ತಿಂಡಿ, ಸ್ನ್ಯಾಕ್ಸ್​, ಊಟ, ಮನರಂಜನೆ, ಯೋಗಕ್ಕೂ ಅಗತ್ಯ ಸಿದ್ಧತೆ ಮಾಡಲಾಗಿದೆ. ಬೆಂಗಳೂರಿನ ಬೇರೆ ಬೇರೆ ಕಡೆಗಳಲ್ಲಿ ನಿರ್ಮಿಸಿರುವ ಕರೊನಾ ಕೇರ್​ ಸೆಂಟರ್​ಗಳಲ್ಲಿ ಹಾಸಿಗೆಗಳ ಕೊರತೆಯಾದಾಗ ಇದನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.ಇದನ್ನೂ ಓದಿರಿಕೆಎಸ್​ಆರ್​ಟಿಸಿ ಸಿಬ್ಬಂದಿಗೆ 1 ವರ್ಷ ವೇತನ ರಹಿತ ರಜೆ, ಲಕ್ಷಕ್ಕೂ ಹೆಚ್ಚು ನೌಕರರ ಪಾಲಿಗೆ ಮರಣಶಾಸನ?
ಬೃಹತ್​ ಕೋವಿಡ್​ ಕೇರ್​ ಸೆಂಟರ್​ಗೆ ಬಿ.ಎಸ್​.ಯಡಿಯೂರಪ್ಪ ಅವರು ಸಂಪುಟ ಸಹೋದ್ಯೋಗಿಗಳಾದ ಡಾ.ಸಿ.ಎನ್​. ಅಶ್ವತ್ಥನಾರಾಯಣ್​, ಬಸವರಾಜ ಬೊಮ್ಮಾಯಿ, ಡಾ.ಕೆ. ಸುಧಾಕರ್, ಬಿ. ಶ್ರೀರಾಮುಲು, ಆರ್​. ಅಶೋಕ್​, ಶಾಸಕ ಎಸ್​.ಆರ್​. ವಿಶ್ವನಾಥ್​ ಅವರೊಂದಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಬೃಹತ್​ ಕೋವಿಡ್ ಕೇರ್ ಸೆಂಟರ್​ನಲ್ಲಿ 100-200 ಜನರಿಗೆ ಒಬ್ಬ ವೈದ್ಯರಂತೆ 600 ವೈದ್ಯರು, 1000 ನರ್ಸ್‌ಗಳು ಇನ್ನಿತರ ಆರೋಗ್ಯ ಯೋಧರು ಬೇಕಾಗಿದ್ದು ಎಲ್ಲವನ್ನೂ ಸರ್ಕಾರ ವ್ಯವಸ್ಥಿತವಾಗಿ ನಿರ್ವಹಿಸುತ್ತಿದೆ ಎಂದು ಸಚಿವ ಡಾ.ಕೆ. ಸುಧಾಕರ್​ ಹೇಳಿದರು.
ಹಳ್ಳಿಗೆ ಹೋಗಬೇಡಿ:ಜನರು ಅನಗತ್ಯವಾಗಿ ಬೆಂಗಳೂರಿನಿಂದ ಹಳ್ಳಿಗಳತ್ತ ತೆರಳಬೇಡಿ. ಹಳ್ಳಿಗಳಲ್ಲಿ ಸೋಂಕು ಹಬ್ಬದಂತೆ ಮುನ್ನೆಚ್ಚರಿಕೆ ವಹಿಸಿ. ಇದು ಒಂದೆರಡು ದಿನದ ಹೋರಾಟವಲ್ಲ. ಸತತ ಪ್ರಯತ್ನ, ನಿಮ್ಮೆಲ್ಲರ ಸಹಕಾರ, ಬೆಂಬಲ ಹಾಗೂ ಸಾಮೂಹಿಕ ಇಚ್ಛಾಶಕ್ತಿಯೊಂದಿಗೆ ಸೋಂಕಿನ ವಿರುದ್ಧ ಜಯಿಸೋಣ ಎಂದು ಸಿಎಂ ಮತ್ತೊಮ್ಮೆ ಮನವಿ ಮಾಡಿದರು.
ಜಮೀನು ಸರ್ವೇ ಮಾಡಲು ಬಂದ ತಹಸೀಲ್ದಾರ್​ ಎದೆಗೆ ಚಾಕು ಇರಿದು ಕೊಂದ ನಿವೃತ್ತ ಶಿಕ್ಷಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 17 =
Remember me
