ಹಾಸನ:ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಕಾರು ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.
ಸಕಲೇಶಪುರ ತಾಲೂಕಿನ ಬಾಳೆಗದ್ದೆ ಬಳಿ ಕೆಎಸ್​ಆರ್​ಟಿಸಿ ಬಸ್ ಮತ್ತು ಓಮ್ನಿ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಮೋಹನ್​-ಶಾರದಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಮೃತಪಟ್ಟವರು ಹಾಗೂ ಬಸ್​ ಚಾಲಕನ ಊರು ಇತ್ಯಾದಿ ವಿವರ ಮತ್ತು ಅಪಘಾತಕ್ಕೆ ಸಂಬಂಧಿಸಿದಂತೆ ಖಚಿತವಾದ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
26 ವರ್ಷಗಳಲ್ಲೇ ಅತ್ಯಧಿಕ ಮಳೆ; ಒಂದೇ ದಿನದಲ್ಲಿ 972 ಮಿ.ಮೀ. ವರ್ಷಧಾರೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 4 =
Remember me
