ಆನೇಕಲ್:ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತ ಎರಡು ಜೀವಗಳನ್ನು ಬಲಿ ಪಡೆದಿದ್ದು, ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಹೋದವರು ಹೆಣವಾಗಿ ಹೋದಂತಾಗಿದೆ. ಆನೇಕಲ್ ತಾಲೂಕಿನ ಚೂಡಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.
ಚಂದಾಪುರ ಸಮೀಪದ ಕಿತ್ತಗಾನಹಳ್ಳಿಯ ನಿವಾಸಿಗಳಾದ ಮುನಿರಾಜಾಚಾರಿ (55), ಅಕ್ಕಯಮ್ಮ (50) ಮೃತಪಟ್ಟ ದಂಪತಿ. ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಇವರು ದ್ವಿಚಕ್ರವಾಹನದಲ್ಲಿ ಆನೇಕಲ್ ತಾಲೂಕಿನ ಚೂಡಹಳ್ಳಿಗೆ ಹೋಗಿದ್ದರು.
ಇದನ್ನೂ ಓದಿ:ಪೂಜೆ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದ ಪೂಜಾರಿ ಸಾವು; ನೋಡನೋಡುತ್ತಿದ್ದಂತೆ ನೂರಾರು ಅಡಿ ಆಳಕ್ಕೆ ಉರುಳಿದ ದೇಹ..
ಚೂಡಗಾನಹಳ್ಳಿ ಬಳಿ ಎದುರುಗಡೆಯಿಂದ ಬರುತ್ತಿದ್ದ ತಮಿಳುನಾಡು ಮೂಲದ ಕ್ಯಾಂಟರ್​ ಈ ದಂಪತಿ ಇದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕ್ಯಾಂಟರ್ ಅಪ್ಪಳಿಸಿದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
‘ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ’ ಎಂದು ಬಿಜೆಪಿ ಮುಖಂಡನಿಗೆ ಬ್ಲ್ಯಾಕ್​ಮೇಲ್​ ಮಾಡಿದ ಅಪರಿಚಿತ

ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
