ಚಿಕ್ಕಬಳ್ಳಾಪುರ:ಮಕ್ಕಳಿಲ್ಲ ಎಂಬ ಕೊರಗಿನಿಂದ ಜಿಗುಪ್ಸೆಗೆ ಒಳಗಾದ ದಂಪತಿಯ ಎರಡು ವರ್ಷಗಳ ದಾಂಪತ್ಯ ಒಂದು ಸೀರೆಯಲ್ಲಿ ಅಂತ್ಯವಾಗಿದೆ. ಅಂದರೆ ಪತಿ-ಪತ್ನಿ ಇಬ್ಬರೂ ಒಂದೇ ಸೀರೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರದ ತಾಲ್ಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಟೋಚಾಲಕನಾಗಿದ್ದ ಚಂದ್ರಶೇಖರ್​ (28) ಮತ್ತು ಶಶಿಕಲಾ (22) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮಕ್ಕಳಿಲ್ಲ ಎಂಬ ಕೊರಗಿನಿಂದಾಗಿ ಇವರು ಈ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇಂದು ಮನೆಯೊಳಗಿದ್ದ ದಂಪತಿ ಎಷ್ಟು ಹೊತ್ತಾದರೂ ಹೊರಗೆ ಕಾಣಿಸಿಕೊಳ್ಳದ್ದರಿಂದ ಅನುಮಾನಗೊಂಡ ಸ್ಥಳೀಯರು ಬಾಗಿಲು ತೆರೆದು ನೋಡಿದಾಗ ಇಬ್ಬರೂ ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿತ್ತು. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ಯಪಾನ ಮಾಡಬೇಡ ಎಂದು ತಾಯಿ ಬುದ್ಧಿಮಾತು ಹೇಳಿದ್ದಕ್ಕೆ ವಿಷ ಕುಡಿದ!; ಮತ್ತೂ ಮತ್ತು ಬೇಕೆಂದವನ ಮೃತ್ಯು..

ಭೀಕರ ಅಪಘಾತ: ಸೇತುವೆ ಮೇಲಿಂದ 30 ಅಡಿ ಕೆಳಗೆ ಬಿದ್ದ ವಾಹನ!; ಒಬ್ಬನ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ

ವಿಷ್ಣುವರ್ಧನ್​ ಜನ್ಮದಿನಂದು ‘ಯಜಮಾನೋತ್ಸವ’; ನಡೆಯಲಿದೆ ದಾಖಲೆಯ ಕಟೌಟ್​​ ಜಾತ್ರೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
