ಬೆಂಗಳೂರು:ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ನಡುವೆ ಉಂಟಾದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ. ಪಶ್ಚಿಮ ಬಂಗಾಳ ಮೂಲದ ಸಂಚಿ ಉರವ್ (36) ಕೊಲೆಯಾದವಳು. ಈಕೆಯ ಪತಿ ಪೂಲ್ ಚಂದ್ ಉರವ್ (40) ಬಂಧಿತ.
ಪಶ್ಚಿಮ ಬಂಗಾಳ ಮೂಲದ ದಂಪತಿ ನಗರದಲ್ಲಿ ಬಿಸುರಾಯ್ ಎಂಬ ಗುತ್ತಿಗೆದಾರನ ಬಳಿ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದರು. ವಿಧಾನಸೌಧ ಸಮೀಪದ ಹೋಟೆಲ್ ಪಕ್ಕದಲ್ಲಿರುವ ಕಟ್ಟಡದ ನೆಲ ಮಹಡಿಯಲ್ಲಿ ದಂಪತಿ ಹಾಗೂ ಇತರ ಆರು ಮಂದಿ ಕಾರ್ಮಿಕರು ವಾಸಿಸುತ್ತಿದ್ದರು.
ಕೌಟುಂಬಿಕ ವಿಚಾರಕ್ಕೆ ದಂಪತಿ ಪ್ರತಿದಿನ ಜಗಳ ಮಾಡುತ್ತಿದ್ದರು. ಮಾ.26ರಂದು ಕಟ್ಟಡಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಶ್ರೀಧರ್‌ಗೆ ಕರೆ ಮಾಡಿದ ಬಿಸುರಾಯ್, ‘ಸಂಚಿ ಎರಡು ದಿನಗಳಿಂದ ಮನೆಯಿಂದ ಹೊರಗಡೆ ಬಂದಿಲ್ಲ. ಮಾತನಾಡದೆ ಮಲಗಿದ್ದಾಳೆ’ ಎಂದು ತಿಳಿಸಿದ್ದ. ಶ್ರೀಧರ್ ಸ್ಥಳಕ್ಕೆ ಬಂದು ನೋಡಿದಾಗ, ಆಕೆಯ ಮುಖದ ಮೇಲೆ ಕಪ್ಪು ಕಲೆಯಾಗಿತ್ತು. ಬಾಯಿಂದ ನೊರೆ ಬಂದಿರುವುದು ಕಂಡು ಬಂದಿತ್ತು.
ಶ್ರೀಧರ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ‘ಇಬ್ಬರ ನಡುವೆ ಜಗಳ ನಡೆದು ಪತ್ನಿಯ ಮುಖ ಹಾಗೂ ಕೆನ್ನೆ ಭಾಗಕ್ಕೆ ಬಲವಾಗಿ ಹೊಡೆದಿದ್ದು, ಆಕೆ ಮೃತಪಟ್ಟಿದ್ದಾಳೆ ಎಂದು ವಿಚಾರಣೆ ವೇಳೆ ಆರೋಪಿ ತಿಳಿಸಿದ್ದಾನೆ ಎಂದು ತಿಳಿದು ಬಂದಿದೆ.
ಭಾಸ್ಕರ್ ರಾವ್ ಸ್ವಯಂ ನಿವೃತ್ತಿ; ಅರ್ಜಿ ಅಂಗೀಕರಿಸಿದ ಕೇಂದ್ರ ಸರ್ಕಾರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
