ಕೊಡಗು:ಆಘಾತಕಾರಿ ಘಟನೆಯೊಂದರಲ್ಲಿ ಕೇರಳ ಮೂಲದ ದಂಪತಿಗಳಿಬ್ಬರು ತಮ್ಮ 11 ವರ್ಷದ ಮಗಳನ್ನು ಕೊಲೆ ಮಾಡಿ ಆ ನಂತರ ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಕಳೆದುಕೊಂಡಿರುವ ಘಟನೆ ಕೊಡಗು ಜಿಲ್ಲೆ ಮಡೆಕೇರಿ ತಾಲ್ಲೂಕಿನ ಕಗ್ಗೋಡ್ಲು ಗ್ರಾಮದ ಅರೇಕಾ ಹೋಮ್​ಸ್ಟೇನಲ್ಲಿ ನಡೆದಿದೆ.
ಮೃತರನ್ನು ವಿನೋದ್ (43), ಜುಬಿ ಅಬ್ರಹಾಂ (37), ಜೋಹಾನ್ (11) ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಡೆತ್​ನೋಟ್​ ಪತ್ತೆಯಾಗಿದ್ದು, ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ಡೆತ್​ನೋಟ್​ನಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಮಗನ ಹೆಸರಿಗೆ ಆಸ್ತಿ ಬರೆಯಲು ನಿರಾಕರಿಸಿದ ತಾಯಿ; ಶಿರಚ್ಛೇದ ಮಾಡಿ ಪರಾರಿಯಾದ ಪುತ್ರ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮೃತರು ಕೇರಳದ ಕೊಟ್ಟಾಯಂನ ನಿವಾಸಿಗಳೆಂದು ತಿಳಿದು ಬಂದಿದೆ. ಮಡಿಕೇರಿಗೆ ಪ್ರವಾಸಕ್ಕೆಂದು ಬಂದಿದ್ದ ಇವರು ಶನಿವಾರ ಸಂಜೆ 6:30ರ ಸುಮಾರಿಗೆ ಹೋಮ್​ಸ್ಟೇನಲ್ಲಿ ರೂಮ್​ ಬಾಡಿಗೆಗೆ ಪಡೆದಿದ್ದರು. ಇಂದು ಬೆಳಗ್ಗೆ ತುಂಬಾ ಹೊತ್ತು ಕಳೆದರೂ ಬಾಗಿಲು ತೆರಯದಿದ್ದಾಗ ಹೋಮ್​ಸ್ಟೇ ಸಿಬ್ಬಂದಿ ಕಿಟಕಿ ಮೂಲಕ ಪರಿಶೀಲನೆ ನಡೆಸಿದಾಗ ಮೂವರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಕೊಟ್ಟಾಯಂನಲ್ಲಿರುವ ಕುಟುಂಬಸ್ಥರಿಗೆ ಈಗಾಗಲೇ ಮಾಹಿತಿ ನೀಡಲಾಗಿದ್ದು, ಅವರು ಬಂದ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮಗಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 10 =
Remember me
