ಭರಮಸಾಗರ:ಪುತ್ರಿಯನ್ನು ಅಮೆರಿಕಕ್ಕೆ ಕಳುಹಿಸಿ ಮರಳುತ್ತಿದ್ದ ದಂಪತಿ, ಮಾರ್ಗಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಕಸವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಈ ಭೀಕರ ಅಪಘಾತ ಸಂಭವಿಸಿದೆ.
ಈ ಅಪಘಾತದದಲ್ಲಿ ದಾವಣಗೆರೆಯ ನಿವೃತ್ತ ಅಬಕಾರಿ ಅಧಿಕಾರಿ ಜಯರಾಂ ನಾಯ್ಕ್ (73), ಇವರ ಪತ್ನಿ ಹೇಮಾವತಿಬಾಯಿ (65) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರಿಗೆ ಇಬ್ಬರು ಪುತ್ರಿಯರಿದ್ದು, ಆ ಪೈಕಿ ಮೊದಲನೆಯವಳು ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದು, ಎರಡನೆಯವಳನ್ನು ಅಮೆರಿಕಕ್ಕೆ ಕಳುಹಿಸಿದ್ದರು.
ಇದನ್ನೂ ಓದಿ:ಶಾಲೆಯ ನಲಿ-ಕಲಿ ಕ್ಲಾಸ್​​ನಲ್ಲಿ ಹಾವು; ಗೊತ್ತಾಗದೆ ನಡೆದ ತರಗತಿ, ಬಳಿಕ ಹೊರಗೆ ಓಡಿದ ವಿದ್ಯಾರ್ಥಿಗಳು..
ಪುತ್ರಿಯನ್ನು ಬೆಂಗಳೂರಿನಿಂದ ಅಮೆರಿಕಕ್ಕೆ ಕಳುಹಿಸಿ ದಾವಣಗೆರೆಗೆ ಕಾರಿನಲ್ಲಿ ಮರಳುತ್ತಿದ್ದಾಗ ಮುಂದೆ ಹೋಗುತ್ತಿದ್ದ ಲಾರಿಯೊಂದಕ್ಕೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ನುಜ್ಜುಗುಜ್ಜಾಗಿದ್ದು, ಪತಿ-ಪತ್ನಿ ಇಬ್ಬರೂ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಭರಮಸಾಗರ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಉಂಟಾಗಿದ್ದು, ಪ್ರಕರಣ ದಾಖಲಾಗಿದೆ.
ರಸ್ತೆ ಅಗಲೀಕರಣದ ಎಡವಟ್ಟು, ಕಾರು ಮರಕ್ಕೆ ಡಿಕ್ಕಿ; ಇಬ್ಬರ ಸಾವು, ಮೂವರ ಪರಿಸ್ಥಿತಿ ಗಂಭೀರ

ಮೇಘಸ್ಫೋಟದ ಹಿಂದೆ ವಿದೇಶಿ ಕೈವಾಡ!; ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 5 =
Remember me
