ಕೋಲಾರ:ಕಾಫಿ ಮಾಡುವಾಗ ಸಂಭವಿಸಿದ್ದ ಗ್ಯಾಸ್​ ಸ್ಫೋಟ ಅವಘಡದಲ್ಲಿ ಗಾಯಗೊಂಡಿದ್ದ ಗಂಡ-ಹೆಂಡತಿ ಇಬ್ಬರೂ ಸಾವಿಗೀಡಾಗಿದ್ದಾರೆ. ಕೋಲಾರದಲ್ಲಿ ಈ ಅವಘಡ ಸಂಭವಿಸಿದ್ದು, ದಂಪತಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುಪ್ಪಡಹಳ್ಳಿ ಗ್ರಾಮದಲ್ಲಿ ಸೆ. 16ರಂದು ಈ ದುರ್ಘಟನೆ ಸಂಭವಿಸಿತ್ತು. ಕೋಲಾರದ ಮಧುಸೂದನ್-ನಂದಿನಿ ಸಾವಿಗೀಡಾದ ದಂಪತಿ. ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ಈ ಅವಘಡ ಉಂಟಾಗಿತ್ತು.
ಇದನ್ನೂ ಓದಿ:ಕಾವೇರಿ ಪರ ಕೂಗಿಗೆ ದನಿಗೂಡಿಸಿದ ಉಪೇಂದ್ರ; ಉಪ್ಪಿ ಆಶಯ ಏನು?
ಅಂದು ಕಾಫಿ ಮಾಡುವ ವೇಳೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿ, ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಗಂಡ-ಹೆಂಡತಿ ಇಬ್ಬರೂ ಸಾವಿಗೀಡಾದರು. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.
ಸಿದ್ದರಾಮಯ್ಯಗೆ ಅಡುಗೆ ಮಾಡಲು ಬರುತ್ತಾ? ಹೆಂಡ್ತಿ ಹತ್ರ ಸಿಎಂ ಯಾವತ್ತಾದ್ರೂ ಬೈಸಿಕೊಂಡಿದ್ರಾ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 2 =
Remember me
