ಬೆಂಗಳೂರು:ಲಾಕ್​ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಕಲಾವಿದರು ಹಾಗೂ ತಂತ್ರಜ್ಞರಿಗೆ ನೆರವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರವಿನ ಕೂಪನ್ ಬಿಡುಗಡೆ ಮಾಡಿದ್ದಾರೆ.
ಲಾಕ್​ಡೌನ್​ನಿಂದ ಸಂಕಷ್ಟದಲ್ಲಿರುವ ಸಿನಿಮಾ ಕಾರ್ವಿುಕರಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ದಿನನಿತ್ಯದ ಅಗತ್ಯದ ಆಹಾರ ಪದಾರ್ಥಗಳನ್ನು ಕೊಳ್ಳುವುದಕ್ಕೆ ಆರು ಸಾವಿರ ಕಾರ್ವಿುಕರಿಗೆ ಕೂಪನ್ ನೀಡಿದೆ. ಶುಕ್ರವಾರ ಸಂಜೆ ನಡೆದ ಸಭೆಯಲ್ಲಿ ಯಡಿಯೂರಪ್ಪ ಅವರು 1,500 ರೂ.ಗಳ ಈ ಕೂಪನ್ ಬಿಡುಗಡೆ ಮಾಡಿದ್ದಾರೆ.
ಮುಖ್ಯಮಂತ್ರಿಗಳು ಮತ್ತು ಅವರ ಮಗ ವಿಜಯೇಂದ್ರ ಅವರ ಸಹಾಯದಿಂದ ಸಿನಿಮಾ ಕಾರ್ವಿುಕರಿಗೆ ಕೂಪನ್ ಸಿಕ್ಕಿದೆ. ಸದ್ಯದಲ್ಲೇ ಈ ಕೂಪನ್​ಗಳನ್ನು ಚಿತ್ರರಂಗದ 27 ವಲಯಗಳ ಆರು ಸಾವಿರ ಕಾರ್ವಿುಕರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ತಿಳಿಸಿದರು. ನಟಿ ತಾರಾ, ರಾಕ್​ಲೈನ್ ವೆಂಕಟೇಶ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಸೇರಿ ಹಲವರು ಉಪಸ್ಥಿತರಿದ್ದರು.
ಮೂರು ವರ್ಷದ ಮಗುವಿನ ಮೇಲೆ ಕುದಿಯುತ್ತಿದ್ದ ಮೀನಿನ ಸಾಂಬಾರ್ ಸುರಿದು ತಾತ, ಚಿಕ್ಕಮ್ಮನಿಂದ ವಿಕೃತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + twelve =
Remember me
