ಬೆಂಗಳೂರು:ಡ್ರಗ್ಸ್ ದಂಧೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಗೃಹದಲ್ಲಿರುವ ನಟಿ ರಾಗಿಣಿ ದ್ವಿವೇದಿ, ತನಗೆ ಆರೋಗ್ಯ ಸಮಸ್ಯೆ ಎದುರಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅನುಮತಿ ನೀಡುವಂತೆ ಕೋರಿ ನಗರದ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಬೆನ್ನು ನೋವು ಸೇರಿದಂತೆ ಕೆಲ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ. ಜೈಲಿನಲ್ಲಿರುವ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಗುಣಮಟ್ಟದ ಚಿಕಿತ್ಸೆಯ ಅಗತ್ಯವಿದೆ. ಹೀಗಾಗಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ನೀಡುವಂತೆ ಅರ್ಜಿಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ:ಪ್ಲಾಸ್ಟಿಕ್​ ಸಮಸ್ಯೆಗೂ ಪರಿಹಾರ, ಸೂಕ್ಷ್ಮಜೀವಿಯ ಸಂಹಾರ; ಇದೇನಿದು ಹೊಸ ಆವಿಷ್ಕಾರ?
ಅಲ್ಲದೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ಮತ್ತು ತಾಯಿ ಬಳಿಯಿದ್ದ ಐಪ್ಯಾಡ್, ಪೆನ್‌ಡ್ರೈವನ್ನು ತನಿಖಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅವುಗಳನ್ನು ತಕ್ಷಣ ಬಿಡುಗಡೆ ಮಾಡಲು ಸೂಚನೆ ನೀಡಬೇಕು. ಪ್ರಕರಣ ಕುರಿತು ಮಾಹಿತಿ ಪಡೆಯಲು ಸಂಬಂಧಿಕರು ಮತ್ತು ವಕೀಲರು ಭೇಟಿ ಮಾಡುವುದಕ್ಕೆ ಅವಕಾಶ ನೀಡಲು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಕೋರಿದ್ದಾರೆ.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಸಿಬಿ ಪರ ವಕೀಲರು, ಅರ್ಜಿದಾರರಿಗೆ ಆರೋಗ್ಯ ಸಮಸ್ಯೆ ಇರುವ ಕುರಿತು ಯಾವುದೆ ದಾಖಲೆಗಳನ್ನು ಸಲ್ಲಿಸಿಲ್ಲ. ಪ್ರಕರಣದ ತನಿಖೆ ಮುಂದುವರೆಯುತ್ತಿದ್ದು, ಈ ಸಂದರ್ಭದಲ್ಲಿ ಸಾಕ್ಷ್ಯಾಧಾರಗಳನ್ನು ಬಿಡುಗಡೆ ಮಾಡಲು ಅವಕಾಶ ಇಲ್ಲ. ಜೊತೆಗೆ, ಬಂಧೀಖಾನೆ ನಿಯಮಗಳ ಪ್ರಕಾರ ವಕೀಲರು ಮತ್ತು ಸಂಬಂಧಿಕರ ಭೇಟಿಗೆ ಅವಕಾಶ ಮಾಡಿಕೊಡಲಾಗಿದೆ. ಆದ್ದರಿಂದ ಎಲ್ಲ ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಅ.16ಕ್ಕೆ ಮುಂದೂಡಿದ್ದಾರೆ.
1400 ಕೋಟಿ ರೂ. ಅವ್ಯವಹಾರ: ಕೊನೆಗೂ ಸಿಕ್ಕಿಬಿದ್ದ ಬ್ಯಾಂಕ್ ಅಧ್ಯಕ್ಷ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 5 =
Remember me
